ನೈಜೀರಿಯಾ: ತೈಲ ಸಂಸ್ಕರಣಾ ಘಟಕ ಭಾರಿ ಸ್ಫೋಟ ಸಂಭವಿಸಿದ್ದು ಪರಿಣಾಮ ಘಟಕದಲ್ಲಿದ್ದ ಕನಿಷ್ಠ 100 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ದಕ್ಷಿಣ ನೈಜೀರಿಯಾದಲ್ಲಿ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಈ ಸ್ಫೋಟ ಸಂಭವಿಸಿದ್ದು ಈ ವೇಳೆ ಘಟಕದಲ್ಲಿದ್ದವರ ಪೈಕಿ ಕನಿಷ್ಠ ನೂರು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರ ತಡರಾತ್ರಿ ಸ್ಫೋಟ ಸಂಭವಿಸಿರುವ ಬಗ್ಗೆ ಪೊಲೀಸರು ಖಚಿತಪಡಿಸಿದ್ದಾರೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ ಸ್ಫೋಟದಲ್ಲಿ 100 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಇದು ಆಫ್ರಿಕಾದ ಅತಿದೊಡ್ಡ ಕಚ್ಚಾ ತೈಲ ಉತ್ಪಾದಕ ನೈಜೀರಿಯಾದಲ್ಲಿ ಇತ್ತೀಚಿಗೆ ಸಂಭವಿಸಿರುವ ಅತಿ ದೊಡ್ಡ ದುರಂತವಾಗಿದೆ ಎಂದು ಹೇಳಲಾಗಿದೆ.
ಶುಕ್ರವಾರ ತಡರಾತ್ರಿ ಅಕ್ರಮ ಸಂಸ್ಕರಣಾ ಘಟಕದಲ್ಲಿ ವ್ಯಾಪಾರಕ್ಕಾಗಿ ತೈಲ ಘಟಕದ ನಿರ್ವಾಹಕರು ಮತ್ತು ಗ್ರಾಹಕರು ಒಟ್ಟುಗೂಡಿದ್ದ ಸ್ಥಳದಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5