ಅಕ್ರಮವಾಗಿ ಜಿಂಕೆ ಬೇಟೆಯಾಡಿದ್ದ ಇಬ್ಬರನ್ನ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ.
ಮೇಡಿಕುಪ್ಪೆ ಅರಣ್ಯ ಇಲಾಖೆ ಸಿಬ್ಬಂದಿಗಳ ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ನಾಡ ಬಂದೂಕಿನ ಸಮೇತ ಜಿಂಕೆಯ ಮೃತದೇಹದ ಜೊತೆಗೆ ಇಬ್ಬರು ಆರೋಪಿಗಳನ್ನ ವಶಕ್ಕೆಪಡೆದಿದ್ದಾರೆ. ಮೇಟಿಕುಪ್ಪೆ ಅಭಿಷೇಕ್ ಮತ್ತು ಕಲ್ಲಹಟ್ಟಿ ನೆಹರು ನಾಯಕ್ ಬಂಧಿತ ಆರೋಪಿಗಳು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮೇಟಿಕುಪ್ಪೆ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕಂಡು ಅರೋಪಿಗಳು ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ಹಿಂಬಾಲಿಸಿ ಇಬ್ಬರನ್ನು ವಶಕ್ಕೆ ಪಡೆದರು. ಬಂಧಿತರ ವಿರುದ್ದ ವನ್ಯಜೀವಿ ಕಾಯ್ದೆ ಪ್ರಕರಣ ದಾಖಲಾಗಿದ್ದು, ತಲೆ ಮರೆಸಿಕೊಂಡ ಇತರೆ ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


