nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026
    Facebook Twitter Instagram
    ಟ್ರೆಂಡಿಂಗ್
    • ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ
    • ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
    • ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    • ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ
    • SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » BMS ಟ್ರಸ್ಟ್‌ʼನ ಅಕ್ರಮಗಳ ಬಗ್ಗೆ ಉನ್ನತಮಟ್ಟದ ತನಿಖೆ ಮತ್ತು ಉನ್ನತ ಶಿಕ್ಷಣ ಸಚಿವರ ರಾಜೀನಾಮೆಗೆ ಹೆಚ್.ಡಿಕೆ ಆಗ್ರಹ
    ರಾಜ್ಯ ಸುದ್ದಿ September 23, 2022

    BMS ಟ್ರಸ್ಟ್‌ʼನ ಅಕ್ರಮಗಳ ಬಗ್ಗೆ ಉನ್ನತಮಟ್ಟದ ತನಿಖೆ ಮತ್ತು ಉನ್ನತ ಶಿಕ್ಷಣ ಸಚಿವರ ರಾಜೀನಾಮೆಗೆ ಹೆಚ್.ಡಿಕೆ ಆಗ್ರಹ

    By adminSeptember 23, 2022No Comments2 Mins Read
    h d kumaraswamy

    BMS ಟ್ರಸ್ಟ್‌ʼನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕು. ಟ್ರಸ್ಟ್‌ & ಆ ಟ್ರಸ್ಟ್‌ನ ಎಲ್ಲಾ ಸ್ವತ್ತುಗಳನ್ನು ರಾಜ್ಯ ಸರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಉನ್ನತ ಶಿಕ್ಷಣ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

    ಈ ಕುರಿತು ಸರಣಿ ಟ್ವೀಟ್ ಮಾಡಿ ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನಾಗಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ವಿಧಾನಸಭೆಯಲ್ಲೇ ಎಲ್ಲವನ್ನೂ ದಾಖಲೆ ಸಮೇತ ಇಟ್ಟಿದ್ದೇನೆ. ಆ ದಾಖಲೆಗಳೇ ಎಲ್ಲವನ್ನೂ ಮಾತನಾಡುತ್ತಿವೆ. ಇನ್ನು ನನ್ನ ಹೊಡೆದ ಗುಂಡು ಎಲ್ಲಿ ವಿಫಲವಾಗಿದೆ? ಅದನ್ನು ವಿಫಲಗೊಳಿಸುವ ಇನ್ನೊಂದು ಹುನ್ನಾರ, ಷಡ್ಯಂತ್ರ ಈಗ ನಡೆದಿದೆ ಅಷ್ಟೇ.


    Provided by
    Provided by

    BMS ಟ್ರಸ್ಟ್ ಬಗ್ಗೆ ಸರಕಾರ ಕಾನೂನು ರೀತ್ಯ ಕ್ರಮ ವಹಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಕಾನೂನು ರೀತ್ಯ ಕ್ರಮ ಎಂದರೆ, ಸಾವಿರಾರು ಕೋಟಿ ರೂ. ಮೌಲ್ಯದ ಸರಕಾರಿ ಸ್ವತ್ತನ್ನು ಸದ್ದಿಲ್ಲದೆ ಖಾಸಗಿ ರಿಯಲ್ ಎಸ್ಟೇಟ್ ಪಟ್ಟಭದ್ರರಿಗೆ ಧಾರೆ ಎರೆದುಕೊಡುವುದಾ ಸಚಿವರೇ? ಎಂದು ಹೆಚ್.ಡಿಕೆ ಚಾಟಿ ಬೀಸಿದ್ದಾರೆ.

    ಸದನದಲ್ಲಿ ನಾನಿಟ್ಟ ಪ್ರತಿ ದಾಖಲೆ ಅಕ್ರಮಕ್ಕೆ ಕನ್ನಡಿ. ನಿಮ್ಮ ಕಣ್ಣಿಗೆ ಈ ಅಕ್ರಮವೆಲ್ಲಾ ಸಕ್ರಮವಾಗಿದ್ದರೆ, ಇದಕ್ಕಿಂತ ದುರಂತ ಇನ್ನೊಂದಿಲ್ಲ. ಎಲ್ಲಾ ದಾಖಲೆಗಳನ್ನು ಮತ್ತೊಮ್ಮೆ ನೋಡಿ. ಅಷ್ಟೂ ಆಸ್ತಿಯನ್ನು ಲಪಟಾಯಿಸಲು ಟ್ರಸ್ಟ್ʼನಲ್ಲಿ ನಡೆದ ಷಡ್ಯಂತ್ರಕ್ಕೆ ಸಚಿವರಾಗಿ ನೀವು ಹೇಗೆಲ್ಲಾ ಸಹಕಾರ ನೀಡಿದ್ದೀರಿ ಎನ್ನುವುದು ಈಗ ಜಗಜ್ಜಾಹೀರು.

    ಉನ್ನತ ಶಿಕ್ಷಣ ಸಚಿವರೇ, 1957ರಲ್ಲಿ ರಚನೆಗೊಂಡು ನೋಂದಣಿಯಾದ BMS ಟ್ರಸ್ಟಿನ ಮೂಲ ಡೀಡನ್ನು ಒಮ್ಮೆ ಓದಿ. ದಾನಿ ಟ್ರಸ್ಟಿ, ಆಜೀವ ಟ್ರಸ್ಟಿ ನೇಮಕದ ಬಗ್ಗೆ ಇರುವ ಷರತ್ತುಗಳನ್ನೂ ತಿಳಿಯಿರಿ. ಆದರೆ, ನೀವು ಜನರಿಗೆ & ಸರಕಾರಕ್ಕೆ ಸೇರಿದ ಇಡೀ ಟ್ರಸ್ಟಿನ ಆಸ್ತಿ ಹೊಡೆಯಲು ನಿಂತವರ ಪರ ನಾಚಿಕೆ ಇಲ್ಲದೆ ವಕಾಲತ್ತು ವಹಿಸುತ್ತಿದ್ದೀರಿ ಎಂದು ಅಶ್ವಥ್ ನಾರಾಯಣ್ ವಿರುದ್ಧ ಕಿಡಿಕಾರಿದ್ದಾರೆ.

    BMS ಎಂಜೀಯರಿಂಗ್‌ ಕಾಲೇಜಿನಲ್ಲಿ ಸೀಟ್‌ ಬ್ಲಾಕಿಂಗ್‌, ಪೇಮೆಂಟ್‌ ಸೀಟುಗಳನ್ನು 50:50 ರಂತೆ ಟ್ರಸ್ಟಿಗಳಿಬ್ಬರು ಹಂಚಿಕೊಂಡಿದ್ದು ನಿಮ್ಮ ಗಮನಕ್ಕೆ ಬರಲಿಲ್ಲವೇ? ಕಾಮೆಡ್-ಕೆ ಆಕ್ಷೇಪಣಾ ಪತ್ರ, ಸರಕಾರದ ಇಬ್ಬರು ಅಧಿಕಾರಿಗಳು ಟ್ರಸ್ಟಿನ ಅಕ್ರಮಗಳ ಬಗ್ಗೆ ಬರೆದ ಪತ್ರಗಳನ್ನು ನೀವು ಓದಲಿಲ್ಲವೇ ಸಚಿವರೇ? ಓದಲಿಲ್ಲ ಎಂದರೆ, ಅದಕ್ಕೆ ಕಾರಣವೇನು?

    ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಎಂದರೆ ಸರಕಾರಿ ಸ್ವತ್ತುಗಳನ್ನು ಭೂರಕ್ಕಸರ ಬಾಯಿಗೆ ಹಾಕುವುದಾ? ಮುಜರಾಯಿ ಇಲಾಖೆಯ ಶ್ರೀ ದೊಡ್ಡ ಬಸವಣ್ಣ, ಕಾರಂಜಿ ಶ್ರೀ ಆಂಜನೇಯ ಸ್ವಾಮಿ ದೇಗುಲಗಳಿಗೆ ಸೇರಿದ ಕೋಟ್ಯಂತರ ರೂ. ಬೆಲೆಯ ಆಸ್ತಿಯನ್ನು ನುಂಗಲು ಹೊರಟ ನುಂಗಣ್ಣರಿಗೆ ದಾರಿ ಸಲೀಸು ಮಾಡಿಕೊಡುವುದಾ? ಇದ್ಯಾವ ಶಿಕ್ಷಣ ನೀತಿ? ಇದ್ಯಾವ ಧರ್ಮನೀತಿ?

    ನಮ್ಮ ಅವಧಿಯಲ್ಲಿ ಶೈಕ್ಷಣಿಕ ಸುಧಾರಣೆಗಾಗಿ ಬಹಳ ಕ್ರಮ ಕೈಗೊಂಡಿದ್ದೇವೆ ಎನ್ನುತ್ತೀರಿ. ಸುಧಾರಣೆ ಎಂದರೆ, ಸಾರ್ವಜನಿಕ ಟ್ರಸ್ಟುಗಳನ್ನು ಹೀಗೆ ನುಂಗಿ ನೀರು ಕುಡಿಯಲು ಒಳಗೊಳಗೇ ಸಹಕಾರ ನೀಡುವುದಾ? ಪ್ರಧಾನಿ ಮೋದಿ ಅವರು ಹೇಳಿಕೊಟ್ಟ ವಿಶ್ವಗುರು ಪರಿಕಲ್ಪನೆ ಇದೇನಾ? ಶೈಕ್ಷಣಿಕೋದ್ಧಾರ ಮಾಡುವುದು ಎಂದರೆ ಹೀಗೆನಾ?

    2018ರಲ್ಲಿ ನನ್ನ ನೇತೃತ್ವದ ಸರಕಾರವು ದಾನಿ ಟ್ರಸ್ಟಿ, ಅಜೀವ ಟ್ರಸ್ಟಿ ನೇಮಕದ ಬಗ್ಗೆ BMS ಟ್ರಸ್ಟಿನಲ್ಲಿ ಕೈಗೊಂಡಿದ್ದ ತಿದ್ದುಪಡಿಗಳು ಅಕ್ರಮ ಎಂದು ಸಾರಿ, ಆ ತಿದ್ದುಪಡಿಗಳನ್ನು ಸಾರಾಸಗಟಾಗಿ ತಿರಸ್ಕರಿತ್ತು. ನನ್ನ ಸರಕಾರ ಹೋದ ಮೇಲೆ ಬಂದ ಬಿಜೆಪಿ ಸರ್ಕಾರ ಈ ಅಕ್ರಮ ತಿದ್ದುಪಡಿಗಳನ್ನು ಶರವೇಗದಲ್ಲಿ ಪುರಸ್ಕರಿಸಿದ್ದು ಹೇಗೆ? ಎಂದು ಹೆಚ್.ಡಿಕೆ ಪ್ರಶ್ನಿಸಿದ್ದಾರೆ.

    ಟ್ರಸ್ಟಿನಲ್ಲಿ ಸರಕಾರದ ಟ್ರಸ್ಟಿಗೇ ಕೊಕ್ ಕೊಟ್ಟು, ಈ ಟ್ರಸ್ಟಿನಲ್ಲಾಗುತ್ತಿದ್ದ ಗೋಲ್ʼಮಾಲ್ ಬಗ್ಗೆ ಸರಕಾರಿ ಟ್ರಸ್ಟಿಯಾಗಿದ್ದ ಐಎಎಸ್ ಅಧಿಕಾರಿ ಡಾ.ಮಂಜುಳಾ ಮತ್ತು ಇನ್ನೊರ್ವ ಐಎಎಸ್ ಅಧಿಕಾರಿ ಮದನ್ ಗೋಪಾಲ್ ಅವರು ಬರೆದ ಪತ್ರಗಳನ್ನು ಕಸದಬುಟ್ಟಿಗೆ ಹಾಕಿದ್ದು ಏಕೆ? ಇದರ ಹಿಂದಿನ ಹುನ್ನಾರ ಏನು ಉನ್ನತ ಶಿಕ್ಷಣ ಸಚಿವರೇ?

    ಟ್ರಸ್ಟಿನಲ್ಲಿ ಕೈಗೊಂಡ ಅಕ್ರಮ ತಿದ್ದುಪಡಿಗಳನ್ನು ಸಕ್ರಮಗೊಳಿಸಲು ತಾವು ತೋರಿದ ಆತುರ, ಕಾಳಜಿ ಎಂಥದ್ದು ಎಂಬುದು ನನಗೆ ಗೊತ್ತು. ಅವುಗಳ ಅನುಮೋದನೆಗಾಗಿ ತಾವೇ ಬರೆದ ಟಿಪ್ಪಣಿಯ ಒಕ್ಕಣಿಯನ್ನು ಒಮ್ಮೆ ಓದಿಕೊಳ್ಳಿ ಅಶ್ವತ್ಥನಾರಾಯಣ ಅವರೇ. ಉನ್ನತ ಶಿಕ್ಷಣ ಸಚಿವರಾದ ನಿಮ್ಮ ಉನ್ನತ ಮಟ್ಟ ಎಷ್ಟು ಕೆಳಮಟ್ಟದಲ್ಲಿದೆ ಎಂಬುದು ಅರ್ಥವಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ

    February 15, 2026

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    ಬೆಂಗಳೂರು: ಕೇಂದ್ರ ಸರ್ಕಾರವು ರಾಜ್ಯದ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗಾಗಿ ಬಿಡುಗಡೆ ಮಾಡಿದ ಕೋಟ್ಯಂತರ ರೂಪಾಯಿ ಅನುದಾನವನ್ನು ಸಿದ್ದರಾಮಯ್ಯ ನೇತೃತ್ವದ…

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.