ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ಪರಸ್ ನೇಪಾಳಿ ಉರುಫ್ ಡೇವಿಡ್ (18) ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಸ್ನೇಹಿತರೇ ಕೃತ್ಯ ಎಸಗಿರುವುದು ಗೊತ್ತಾಗಿದೆ.
ಮೂಲತಃ ನೇಪಾಳದ ಪರಸ್ ಹೋಟೆಲೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದು, ಹರಳೂರು ಬಳಿ ಸ್ನೇಹಿತರ ಜೊತೆ ವಾಸವಿದ್ದರು. ಇತ್ತೀಚೆಗೆ ಪರಸ್, ಬೇರೆ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದರು. ಸ್ನೇಹಿತರ ಜೊತೆ ಬಾರ್ ನಲ್ಲಿ ಮದ್ಯ ಕುಡಿದು ಕೊಠಡಿಗೆ ವಾಪಸು ಬರುತ್ತಿದ್ದರು’ ಎಂದು ಪೊಲೀಸರು ತಿಳಿಸಿದರು.
ಶನಿವಾರ ರಾತ್ರಿ ಪರಸ್ ಹಾಗೂ ಸ್ನೇಹಿತರು ಬಾರ್ ನಲ್ಲಿ ಮದ್ಯದ ಪಾರ್ಟಿ ಮಾಡಿದ್ದರು. ಮಾತಿಗೆ ಮಾತು ಬೆಳೆದು ಗಲಾಟೆ ಶುರುವಾಗಿತ್ತು. ಸ್ನೇಹಿತರನ್ನು ಅವಾಚ್ಯವಾಗಿ ನಿಂದಿಸಿದ್ದ ಪರಸ್, ಬಾರ್ ನಿಂದ ಹೊರಟು ಕೊಠಡಿಗೆ ಬಂದಿದ್ದರು’ ಎಂದು ಪೊಲೀಸರು ಹೇಳಿದರು.
‘ಹಿಂಬಾಲಿಸಿಕೊಂಡು ಬಂದಿದ್ದ ಸ್ನೇಹಿತರು ಪುನಃ ಜಗಳ ತೆಗೆದಿದ್ದರು. ಆಗ ಚಾಕುವಿನಿಂದ ಇರಿದಿದ್ದು, ರಕ್ತಸ್ರಾವದಿಂದ ಪರಸ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ನೇಹಿತರೇ ಕೃತ್ಯ ಎಸಗಿರುವುದು ಗೊತ್ತಾಗಿದ್ದು, ಪತ್ತೆಗೆ ತನಿಖೆ ಮುಂದುವರಿಸಲಾಗಿದೆ’ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


