ಕೊರಟಗೆರೆ ತಾಲ್ಲೂಕು ಕಸಬಾ ಹೋಬಳಿ ಹುಲೀಕುಂಟೆ ಗ್ರಾಮದಲ್ಲಿ ಅಲೆಮಾರಿಗಳಿಗೆ ವೃದ್ದಾಪ್ಯ ವೇತನ,ಅಂಗವಿಕಲ ವೇತನ ಸೌಲಭ್ಯ ಮನೆಗೆ ತಲುಪಿಸಲು ತಾಲೂಕು ಆಡಳಿತ ವಿಫಲವಾಗಿರುವ ಸಂಬಂಧ ನಮ್ಮತುಮಕೂರು ನಿನ್ನೆ ಸವಿವರವಾದ ವರದಿ ಮಾಡಿತ್ತು. ಈ ವರದಿಯ ಬೆನ್ನಲ್ಲೇ ಎಚ್ಚೆತ್ತುಕೊಂಡ ಕೊರಟಗೆರೆ ತಹಶೀಲ್ದಾರ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ.
ಈ ಹಿಂದಿನ ಕೊರಟಗೆರೆ ತಹಶೀಲ್ದಾರ್ ನಹೀದಾ ಜಂ ಜಂರವರು ಈ ಜನರಿರುವ ಸ್ಥಳಕ್ಕೆ ಸಂಬಂಧಿಸಿದ ನೌಕರರನ್ನು ಕಳುಹಿಸಿ ಸ್ಥಳದಲ್ಲೇ ಬಹುತೇಕ ಮೂಲ ದಾಖಲೆಗಳಾದ ಆಧಾರ್, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ ಮಾಡಿಸಿ ಕರ್ತವ್ಯ ಪ್ರಜ್ಞೆಯ ಜೊತೆಗೆ ಮಾನವೀಯತೆ ಮೆರೆದಿದ್ದರು. ಈ ನಡುವೆ ಅವರು ವರ್ಗಾವಣೆಯಾಗಿದ್ದರಿಂದಾಗಿ ಅಲೆಮಾರಿಗಳಿಗೆ ಸಂವಿಧಾನದತ್ತವಾಗಿ ಸಿಗಬೇಕಾಗಿದ್ದ ಸವಲತ್ತುಗಳಿಂದ ವಂಚಿತರಾಗಿದ್ದರು.
ಈ ಬಗ್ಗೆ ನಮ್ಮತುಮಕೂರು ಮಾಧ್ಯಮದಲ್ಲಿ ವರದಿ ಪ್ರಕಟಗೊಂಡು ಕೆಲವೇ ಗಂಟೆಗಳ ಅವಧಿಯಲ್ಲಿ ಕೊರಟಗೆರೆ ತಹಶೀಲ್ದಾರ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಇನ್ನೂ ತಹಶೀಲ್ದಾರ್ ಅವರು ಅಲೆಮಾರಿಗಳ ಸಮಸ್ಯೆಗೆ ಹೇಗೆ ಪರಿಹಾರ ನೀಡಲಿದ್ದಾರೆ ಎನ್ನುವ ಬಗ್ಗೆ ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ, ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ…
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy