ಪಾವಗಡ: ತಾಲೂಕು ಚನ್ನಕೇಶವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ದೇವರಹಟ್ಟಿಯಲ್ಲಿ, ಪಾವಗಡ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು..
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಉಪನ್ಯಾಸಕರುಗಳಾದ ದೊಡ್ಡಯ್ಯ ಮತ್ತು ಬೊಮ್ಮಣ್ಣ , ಶಿಕ್ಷಣ, ಮೂಢನಂಬಿಕೆ, ಆಚಾರ, ವಿಚಾರಗಳ ಬಗ್ಗೆ ವಿಶೇಷವಾಗಿ ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಿಸುವುದರ ಬಗ್ಗೆ ತಿಳುವಳಿಕೆ ನೀಡಿದರು. ಹೆಣ್ಣು ಮಕ್ಕಳು ಮುಟ್ಟು ಆದ ನಂತರ ಅವರನ್ನು ಮೂರು ಅಥವಾ ನಾಲ್ಕು ದಿನಗಳ ಕಾಲ ಮನೆಯಿಂದ ಹೊರಗೆ ಹಾಕುವ ಸಂಪ್ರದಾಯವನ್ನು ಬಿಟ್ಟು ಬಿಡಬೇಕು ಎಂದು ಅವರು ಇದೇ ವೇಳೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಿದರು
ಶಿಕ್ಷಕರಾದ ಸಣ್ಣ ಚಿತ್ತಪ್ಪ ಮಾತನಾಡುತ್ತಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಗ್ರಾಮಸ್ಥರಿಗೆ ಸಿಗುವಂತೆ ಅನುಕೂಲ ಮಾಡಿಕೊಡಬೇಕೆಂದು ಇಲಾಖೆಯ ಅಧಿಕಾರಿಗಳಲ್ಲಿ ಒತ್ತಾಯಿಸಿದರು.
ಇದೇ ವೇಳೆ ಮಾತನಾಡಿದ ಉಪನ್ಯಾಸಕರಾದ ನಾಗೇಂದ್ರಪ್ಪ, ಸಮುದಾಯದ ಜನರು ದುಶ್ಚಟಗಳಿಂದ ದೂರವಿದ್ದು, ಮುಂದಿನ ಉತ್ತಮ ಭವಿಷ್ಯಕ್ಕೆ ತಳಪಾಯ ಹಾಕುವಂತೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ದೇವರಹಟ್ಟಿ ಗ್ರಾಮದ ಹಿರಿಯರು ಮುಖಂಡರು ಹಾಗೂ ಊರಿನ ಹೆಣ್ಣುಮಕ್ಕಳು ಮತ್ತು BCM ಇಲಾಖೆಯ ಅಧಿಕಾರಿಗಳು ಸೇರಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವರದಿ: ದೇವರಹಟ್ಟಿ ನಾಗರಾಜು, ಕಸಬಾ ಹೋಬಳಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB