ಕೊರಟಗೆರೆ: ಕೇಂದ್ರ ಸರ್ಕಾರ ನರೇಗಾ ಯೋಜನೆ, ವಿಕಸಿತ್ ಭಾರತ್ ರೋಜಗಾರ್ ಮತ್ತು ಅಜೀವಕಾ ಮಿಷನ್ ಕಾಯ್ದೆ 2025 ಎಂದು ಬದಲಾಯಿಸಿ ಹೊಸ ಕಾಯ್ದೆಗಳನ್ನ ಜಾರಿಗೆ ತಂದಿರುವುದರ ವಿರುದ್ದ ಫೆ.12 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ರಂಗಹನುಮಯ್ಯ ತಿಳಿಸಿದರು.
ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ರೈತ ಸಂಘ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಕುರಿತಾಗಿ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯನ್ನ ಉದ್ದೇಶಿಸಿ ಮಾತನಾಡಿದರು.
ಕೇಂದ್ರದಲ್ಲಿ ಮೂರು ಬಾರಿ ಅಧಿಕಾರ ಹಿಡಿದಿರುವ ನರೇಂದ್ರ ಮೋದಿ ಸರ್ಕಾರ ೨೦೨೫ರಲ್ಲಿ ನವಂಬರ್‌ನಲ್ಲಿ ೪ ಕಾರ್ಮಿಕ ವಿರೋಧಿ ಕಾಯ್ದೆಗಳನ್ನ ಜಾರಿಗೆ ತಂದಿದ್ದು, ಇದರ ಜೊತೆಗೆ ನರೇಗಾ ಯೋಜನೆ ಮತ್ತೆ ಚಾಲನೆ ನೀಡುವುದು, ಭೂ ಸ್ವಾಧೀನ ಕಾಯ್ದೆಯನ್ನ ಹಿಂಪಡೆಯಬೇಕು, ಎಪಿಎಂಸಿ ಕಾಯ್ದೆ, ಜಾನುವಾರು ಸಂರಕ್ಷಣಾ ತಿದ್ದುಪಡಿ, ವಿದ್ಯುತ್ ಖಾಸಗಿಕರಣ ಕೈ ಬಿಡಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರ ಹಮ್ಮಿಕೊಂಡಿದ್ದು ಸಾರ್ವಜನಿಕರ ಈ ಪ್ರತಿಭಟನೆ ಭಾಗವಹಿಸಿ ಎಂದು ಮನವಿ ಮಾಡಿದರು.
ಸಿಐಟಿಯು ಅಧ್ಯಕ್ಷೆ ವನಜಾಕ್ಷಿ ಮಾತನಾಡಿ, ಐ.ಸಿ.ಡಿ.ಎಸ್. ಯೋಜನೆಯನ್ನು ಪ್ರಾರಂಭಿಸಿ ೫೦ ವರ್ಷಗಳು ಕಳೆದರೂ ನಮ್ಮ ಯೋಜನೆ ಖಾಯಂ ಆಗಲಿಲ್ಲ. ನಮ್ಮ ಕೆಲಸವೂ ಖಾಯಂ ಆಗಲಿಲ್ಲ. ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ ಅಂಗನವಾಡಿ ಮಕ್ಕಳಿಗೆ ಕೊಡುವ ಆಹಾರಕ್ಕೆ ಭದ್ರತೆ ಸಿಕ್ಕಿದೆ. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಹೇಳಿ ಕೊಡುವ ಶಿಕ್ಷಣಕ್ಕೆ ಭದ್ರತೆ ಸಿಕ್ಕಿದೆ. ಆದರೆ ಇಡೀಯಾಗಿ ಯೋಜನೆಗೆ ಸಿಗಬೇಕಾದ ಸ್ಥಾನಮಾನ ಸಿಗಲಿಲ್ಲ. ಸ್ಥಾನಮಾನ ಕೊಟ್ಟರೆ ಬಜೆಟ್‌ನ್ನು ಹೆಚ್ಚಿಸಬೇಕು ಈಗಿರುವ ಕೇಂದ್ರ ಸರ್ಕಾರದ ಬಜೆಟ್ ಕೇವಲ ೨೬ ಸಾವಿರ ಕೋಟಿ ಮಾತ್ರ. ೨೦೧೮ ರಿಂದ ಅಂಗವಾಡಿ ನೌಕರರಿಗೆ ಕೇಂದ್ರ ಸರ್ಕಾರ ವೇತನ ಹೆಚ್ಚಳ ಮಾಡಲಿಲ್ಲಿಂದಿಗೂ ಅಂಗನವಾಡಿ ಕಾರ್ಯಕರ್ತೆಗೆ ೨೭೦೦ ಮಾತ್ರ ಹಾಗೆ ಸಹಾಯಕಿಗೆ ೧೩೫೦ ಮಾತ್ರ ನೀಡಲಾಗುತ್ತಿದೆ. ಇದರಿಂದ ಜೀವನ ನೆಡಸಲು ಸಾದ್ಯವಾಗುತ್ತಿಲ್ಲ. ಈ ತಾರತಮ್ಯ ತೆಗೆದು ಖಾಯಂ ಮಾಡಬೇಕು ಎಂದು ತಿಳಿಸಿದರು.
ರೈತ ಸಂಘದ ಪ್ರಧಾನ ಕಾರ್ಯದರ್ಶಿ, ಶಬ್ಬೀರ್ ಬಾಷ್ ಮಾತನಾಡಿ, ಫೆ.12 ರಂದು ಕೊರಟಗೆರೆ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ತಾಲೂಕು ಕಚೇರಿವರೆಗೂ ಪ್ರತಿಭಟನಾ ಜಾಥಾ ಹೊರಡಲಾಗುವುದು, ಕೊರಟಗೆರೆ ಪಟ್ಟಣದ ಆಟೋ ಚಾಲಕರು ಅಂಗಡಿ ಮಾಲೀಕರು ಹೋಟಲ್ ಮಾಲೀಕರು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಹಾಗೂ ಸಾರ್ವಜನಿಕರು ಈ ಮುಷ್ಕರದಲ್ಲಿ ಭಾಗವಹಿಸಿ ಪ್ರತಿಭಟನೆಯನ್ನ ಯಶಸ್ವಿಗೊಳಿಸಿ ಎಂದು ಮನವಿ ಮಾಡಿದರು.
ಇದೆ ಸಂದರ್ಭದಲ್ಲಿ ಕರವೇ ಪ್ರಧಾನ ಕಾರ್ಯದರ್ಶಿ ಸೈಫುಲ್ಲಾ, ಪ್ರಧಾನ ಕಾರ್ಯದರ್ಶಿ, ಶಬ್ಬೀರ್ ಬಾಷ್, ಸಂಚಾಲಕರು ಅದಿಲಕ್ಷ್ಮಿ, ಷಯುತಾ ಪರಿವಿನ್, ಅಕ್ಷರ ದಾಸೋಹ ಅಧ್ಯಕ್ಷ ನಾಗರತ್ನಮ್ಮ,ಉಮಾದೇವಿ, ವೀಣಾ, ನರಸಮ್ಮ, ದೊಡ್ಡಕ್ಕ, ನಂಜಮ್ಮ, ಸುಮ, ಮಾರುತಿ, ಮುದ್ದಬಸವಯ್ಯ, ರಾಕೇಶ್, ಸಿದ್ದರಾಜು, ದಿನೇಶ್, ಪಾಪಣ್ಣ, ಶ್ರೀನಿವಾಸ್ ಸೇರಿದಂತೆ ಇತರರು ಇದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


