ಸರಗೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಪವಿತ್ರಗೌಡ ವಿರುದ್ಧ ಪಟ್ಟಣದಲ್ಲಿ ಮೆರವಣಿಗೆ ಮೂಲಕ ಬೃಹತ್ ಪ್ರತಿಭಟನೆ ನಡೆಸಿ ದರ್ಶನ್ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದರು.
ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದಕ್ಕಾಗಿ ಕೊಲೆಯಾಗಿರುವ ರೇಣುಕಾ ಸ್ವಾಮಿ ಪರವಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ದರ್ಶನ್ ಮತ್ತು ಪವಿತ್ರಗೌಡ ಹಾಗೂ ಸಹಚರರು ಆರೋಪಿಗಳನ್ನು ಗಲ್ಲಿಗೆ ಹಾಕಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ತಾಲ್ಲೂಕಿನ ಪಟ್ಟಣದ ಸಂತೆ ಮಾಸ್ತಮ್ಮ ದೇವಸ್ಥಾನದಿಂದ ಆರಂಭವಾದ ಪ್ರತಿಭಟನೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ದರ್ಶನ್ ವಿರುದ್ಧ ವಿವಿಧ ಘೋಷಣೆ ಕೂಗುತ್ತ ನಡೆಸಿ ಅದೇ ಬಸ್ ನಿಲ್ದಾಣದ ಮಾರ್ಗವಾಗಿ ತಹಶೀಲ್ದಾರ್ ಕಚೇರಿ ತೆರಳಿ ಮುಂಭಾಗದಲ್ಲಿ ಪ್ರತಿಭಟನಕಾರರು ಜಮಾಯಿಸಿ ಮಳೆಯನ್ನು ಲೆಕ್ಕಿಸದೆ ಮಳೆಯಲ್ಲಿ ಪ್ರತಿಭಟನೆ ನಡೆಸಿದರು.
ನಂತರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಅಧ್ಯಕ್ಷ ಡಿ ಜಿ ಶಿವರಾಜಪ್ಪ ಮಾತನಾಡಿ ಚಿತ್ರದುರ್ಗದ ಮೃತ ರೇಣುಕಾ ಸ್ವಾಮಿ ಅವರನ್ನ ಕ್ರೂರಿಯಾಗಿ ಹಿಂಸಿಸಿ ಕೊಲೆ ಮಾಡಿರುವುದು ಅತ್ಯಂತ ಅಮಾನವ ಘಟನೆಯಾಗಿದೆ. ಕೂಡಲೇ ಆರೋಪಿಗಳನ್ನು ಗಲ್ಲಿಗೆ ಏರಿಸಬೇಕು ಎಚ್ಚರಿಸಿದರು.
ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಚಿತ್ರನಟ ದರ್ಶನ್ ಹಾಗೂ ಅವರ ತಂಡವನ್ನು ಉಗ್ರ ಶಿಕ್ಷೆಗೆ ಗುರಿಪಡಿಸಬೇಕು ಹಾಗೂ ದರ್ಶನ್ ಅವರನ್ನು ಕನ್ನಡ ಚಿತ್ರರಂಗದಿಂದ ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದರು.
ಬಿಜೆಪಿ ಜಿಲ್ಲಾ ವಕ್ತಾರ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಿ ಕೆ ಗಿರೀಶ ಮಾತನಾಡಿದರು. ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ರುಕೀಯಾ ಬೇಗಂ ಪ್ರತಿಭಟನಾಕಾರರ ಮನವಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಮಹಾಸಭಾ ಉಪಾಧ್ಯಕ್ಷ ಎಸ್ ಎಸ್ ಪ್ರಭುಸ್ವಾಮಿ, ಕಾರ್ಯದರ್ಶಿ ಸಿದ್ದಪ್ಪ, ಶಿವಕುಮಾರ್, ನಟರಾಜು, ಗಣಪತಿ, ಮಹದೇವಸ್ವಾಮಿ, ಬಾಡಗ ಮಾದಪ್ಪ,ಕೆ ಟಿ ಮಹದೇವಪ್ಪ,ಕಾಟವಾಳು ಪರಶಿವಮೂರ್ತಿ, ಸುನಂದಾ ರಾಜ್, ಅನುಪಮ ಹೋಟೆಲ್ ಮಾಲೀಕ ಮೋಹನ್ ಕುಮಾರ್, ಬ್ರುಗೇಶ್, ಭವನೇಶ್, ಕೆಂಡಗಣ್ಣಸ್ವಾಮಿ, ಯೋಗೇಶ್, ಗಿರಿ ಕುಮಾರ್, ಪ್ರಕಾಶ್, ಜಯಕುಮಾರ್, ಸೋಮಶೇಖರ್, ದೊರೆಸ್ವಾಮಿ, ಬಸವರಾಜು, ಮಹೇಶ್, ನಿಜಪ್ಪ,ಪಪಂ ಸದಸ್ಯರು ವಿನಾಯಕ ಪ್ರಸಾದ್, ಶಿವಕುಮಾರ್, ಸುರೇಶ್, ಶಿವಪ್ಪ, ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA