ಬೆಂಗಳೂರು: ಕೇಂದ್ರ ಸರ್ಕಾರದ ಜೊತೆ ನಾವಿದ್ದೇವೆ, ಉಗ್ರರ ಎಲ್ಲಾ ತಾಣಗಳನ್ನು ನಾಶಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಉಗ್ರರ ಗುಂಡೇಟಿಗೆ ಬಲಿಯಾದ ಮತ್ತಿಕೆರೆಯ ಭರತ್ ಭೂಷಣ್ ಅವರ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ನಾನು ಸರ್ಕಾರದ ಪರವಾಗಿ ಕನ್ನಡ ನಾಡಿನ ಏಳು ಕೋಟಿ ಜನರ ಪರವಾಗಿ ಭರತ್ ಭೂಷಣ್‌ಗೆ ಶ್ರದ್ದಾಂಜಲಿ ಸಲ್ಲಿಸಿದ್ದೇನೆ. ಇನ್ನೂ ಚಿಕ್ಕ ವಯಸ್ಸು. ಭರತ್ ಭೂಷಣ್ ಬಿಇ ಎಂಬಿಎ ಮಾಡಿದ್ದಾರೆ. ಉಗ್ರರು ಅಮಾನವೀಯವಾಗಿ ಕೃತ್ಯ ಎಸಗಿದ್ದಾರೆ ಎಂದರು.
ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದೇನೆ. ಉಗ್ರ ಚಟುವಟಿಕೆಗಳು ಈ ದೇಶದಿಂದ ಹೋಗಬೇಕು. ಯಾವುದೇ ಕಾರಣಕ್ಕೂ ಸರ್ಕಾರ ಕನಿಕರ ತೋರಬಾರದು ಎಂದು ಮನವಿ ಮಾಡಿದರು.
ಹಾಡಹಗಲೇ ಹೆಂಡತಿ, ಮಗು ಇದ್ದಾಗಲೆ ಶೂಟ್ ಮಾಡೋದಕ್ಕಿಂತ ಹೇಯಕೃತ್ಯ ಇನ್ನೊಂದಿಲ್ಲ. ಮನುಷ್ಯತ್ವ ಇಲ್ಲದವರು ಅವರು. ಇದನ್ನು ಖಂಡಿಸುತ್ತೇನೆ ಎಂದರು.
ಇದೇ ಜಿಲ್ಲೆಯಲ್ಲಿ ಪುಲ್ವಾಮ ಅಟ್ಯಾಕ್ ಆಯಿತು. ಘಟನೆಯಲ್ಲಿ 40 ಸೈನಿಕರು ಸಾವನ್ನಪ್ಪಿದ್ದರು. ಅಲ್ಲೇ ಇದೀಗ ಮತ್ತೆ ಮರುಕಳಿಸಿದೆ. ಅವರು ಎಲ್ಲೇ ಇದ್ದರೂ ಪತ್ತೆ ಹಚ್ಚಿ ನಿರ್ಮೂಲನೆ ಮಾಡಬೇಕು. ಬಹುಷಃ ಎಲ್ಲೋ ಒಂದು ಕಡೆ ಇಂಟೆಲಿಜೆನ್ಸ್ ಫೇಲ್ಯೂರ್ ಆಗಿದೆ ಅನ್ನಿಸುತ್ತಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW