ಬೆಂಗಳೂರು: ನ್ಯಾಯಾಂಗ ಬಡಾವಣೆ, ಯಲಹಂಕ ಬೆಂಗಳೂರು , ನ್ಯಾಯಾಂಗ ಇಲಾಖೆಯ ನ್ಯಾಯಾಧೀಶರು, ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಬಿವೃದ್ದಿ ಸಂಘ ಇವರು ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನಿಸಿ ಅವರ ಭಾವಚಿತ್ರವನ್ನು ಇಡದೆ ನ್ಯಾಯಮೂರ್ತಿ ಮತ್ತು ನ್ಯಾಯಾಧೀಶರನ್ನೊಳಗೊಡಂತೆ ಸಭೇಯಲ್ಲಿ ಭಾಗವಹಿಸಿದ ಎಲ್ಲರೂ ಡಾ.ಅಂಬೇಡ್ಕರ್ ರವರ ಹೆಸರನ್ನು ಪ್ರಸ್ಥಾಪಿಸದೆ ಅವಮಾನಿಸಿರುವ ಆರೋಪ ಕೇಳಿ ಬಂದಿದೆ.
ಘಟನೆಯನ್ನು ಖಂಡಿಸಿದ ನಿವೃತ್ತ ಜಂಟಿ ನಿರ್ದೇಶಕರು, ಭೂದಾಖಲೆ ಇಲಾಖೆ ಮತ್ತು ಕರ್ನಾಟಕದ ಉಚ್ಚ ನ್ಯಾಯಾಲಯದ ವಕೀಲರು ಮುದ್ದುರಂಗಪ್ಪ, ನಿವೃತ್ತ ಸಹಾಯಕ ನಿಯಂತ್ರಕರು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಜಿ.ಎನ್.ನರಸಿಂಹಮೂರ್ತಿ, ಡಾ.ಬಾಬಾ ಸಾಹೇಬರ್ ಅಂಬೇಡ್ಕರ್ ರವರು ಭಾರತಕ್ಕೆ ನೀಡಿದ ಸಂವಿಧಾನದ ಭಿಕ್ಷೆಯಿಂದ ನ್ಯಾಯಾಂಗದ ಉನ್ನತ ಹುದ್ದೆಯನ್ನು ಅಲಂಕರಿಸಿದ ನ್ಯಾಯಾಮೂರ್ತಿ, ನ್ಯಾಯಾದೀಶರುಗಳಿಂದಲೇ ಡಾ.ಅಂಬೇಡ್ಕರ್ ರವರಿಗೆ ಅವಮಾನವಾಗಿರುವುದು ಹಾಗೂ ಸಭೆಯಲ್ಲಿ ಜೈ ಶ್ರೀ ರಾಮ್ ಘೋಷಣೆಯನ್ನು ಮೊಳಗಿಸಿರುವುದು ದುರಾದೃಷ್ಟಕರ ಸಂಗತಿಯಾಗಿದೆ. ಈ ಘಟನೆಯನ್ನು ತೀವ್ರವಾಗಿ ನಾವು ಖಂಡಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx