ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದ ಅಪ್ರಾಪ್ತ ವಯಸ್ಸ ಬಾಲಕಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಕೂಡಲೇ ಆರೋಪಿಗೆ ಬಸ್ಸಿನಲ್ಲಿದ್ದ ಸಹ ಪ್ರಯಾಣಿಕರು ಹಲ್ಲೆ ನಡೆಸಿರುವ ಘಟನೆಯೊಂದು ಶಿರಾಡಿ ಘಾಟ್ ಪರಿಸರದಲ್ಲಿ ನಡೆದಿದೆ.
ಈ ಕುರಿತ ವೀಡಿಯೋ ಕೂಡಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಪ್ರಾಪ್ತ ಬಾಲಕಿಯ ಕುಟುಂಬವು ಧರ್ಮಸ್ಥಳಯಾತ್ರೆ ಕೈಗೊಂಡಿದ್ದು, ಬಾಲಕಿ ಕುಳಿತಿದ್ದ ಆಸನದ ಸನಿಹದಲ್ಲೇ ಕುಳಿತಿದ್ದ ವ್ಯಕ್ತಿ ಬಾಲಕಿಗೆ ಲೈಂಗಿಕ ಹಿಂಸೆ ನೀಡುವುದನ್ನು ಪ್ರಯಾಣಿಕರು ವೀಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಾಲಕಿ ಈ ಸಂದರ್ಭದಲ್ಲಿ ತನ್ನ ಸಂಬಂಧಿಕರಲ್ಲಿ ಈ ವಿಚಾರ ತಿಳಿಸಿದ್ದಾಳೆ. ಕೂಡಲೇ ಬಸ್ಸಿನಲ್ಲಿದ್ದ ಮಹಿಳಾ ಪ್ರಯಾಣಿಕರು ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಈ ಸಂದರ್ಭದಲ್ಲಿ ಕಿರುಕುಳ ನೀಡಿದ ವ್ಯಕ್ತಿಯ ಬೆಂಬಲಿಗನೋರ್ವ ಹೊರಗಿನವರಿಗೆ ಫೋನ್ ಮೂಲಕ ಇದನ್ನು ತಿಳಿಸಿದ್ದು, ಆ ನಂತರ ಕೆಲವು ಬಸ್ಸಿನೊಳಗೆ ಬಂದು ವೀಡಿಯೋ ಚಿತ್ರೀಕರಣ ಮಾಡಿದ ವ್ಯಕ್ತಿಯನ್ನು ವಿಚಾರಿಸಲು ಮುಂದಾಗಿದ್ದಾರೆ. ಕೂಡಲೇ ಮಾಹಿತಿ ಪಡೆದ ಪೊಲೀಸರು ವೀಡಿಯೋ ಚಿತ್ರೀಕರಣ ಮಾಡಿದ ವ್ಯಕ್ತಿಯನ್ನು ಉಪ್ಪಿನಂಗಡಿಯಿಂದ ಆತನ ಮನೆಗೆ ಸುರಕ್ಷಿತವಾಗಿ ತಲುಪಿಸುವ ವ್ಯವಸ್ಥೆ ಮಾಡಿದ್ದಾರೆ ಎಂದು ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


