ಬಾರ್ ಮಾಲೀಕರು ಮತ್ತು ಗ್ರಾಹಕರ ನಡುವೆ ನಡೆದಿದ್ದ ಗಲಾಟೆ ಸಂಬಂಧ ಪ್ರಕರಣ ಮುಕ್ತಾಯಗೊಳಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ.
ತಮ್ಮ ವಿರುದ್ಧದ ಪ್ರಕರಣ ಮತ್ತು ಈ ಸಂಬಂಧ ವಿಚಾರಣಾ ಪ್ರಕ್ರಿಯೆಯನ್ನು ರದ್ದು ಮಾಡುವಂತೆ ಕೋರಿ ಅಲೋಕ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.


