ಕೋಲಾರ: ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಐವರಿಂದ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಸಂತ್ರಸ್ತೆ ತಾಯಿ ದೂರಿನ ಮೇರೆಗೆ ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಐವರು ಆರೋಪಿಗಳ ಪೈಕಿ ನಾಗರಾಜ್, ಲವಕುಮಾರ, ನವೀನ್ ಬಂಧಿಸಲಾಗಿದೆ.
ತಲೆ ಮರೆಸಿಕೊಂಡಿರುವ ಶಬರೀಶ್, ಸುಮನ್ ಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಸಂತ್ರಸ್ತ ಬಾಲಕಿಯನ್ನು ಕೆಜಿಎಫ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


