nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?

    September 15, 2026

    ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

    September 15, 2026

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026
    Facebook Twitter Instagram
    ಟ್ರೆಂಡಿಂಗ್
    • ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?
    • ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್
    • ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ
    • ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ
    • ಬೀದರ್: ಮಳೆಯಿಲ್ಲದೆ ಒಣಗಿದ ಬೆಳೆ; ಟ್ರ್ಯಾಕ್ಟರ್‌ ಹರಿಸಿ ಸೋಯಾಬೀನ್‌ ನಾಶಪಡಿಸಿದ ರೈತ!
    • ಕಲಬುರಗಿ: ಗಣೇಶನ ಮೂರ್ತಿ ತರಲು ತೆರಳುತ್ತಿದ್ದಾಗ ಬೈಕ್ ಅಪಘಾತ:  ಸವಾರ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ
    • ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಎಸ್ಆರ್ ನಿಧಿಯನ್ನು ಗ್ರಾಮೀಣ ಭಾಗದ ಶಾಲೆಗಳ ಗುಣಮಟ್ಟ ಹೆಚ್ಚಿಸಲು ಮೀಸಲಿಡಿ: ಉದ್ಯಮಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ
    ರಾಜ್ಯ ಸುದ್ದಿ November 30, 2023

    ಸಿಎಸ್ಆರ್ ನಿಧಿಯನ್ನು ಗ್ರಾಮೀಣ ಭಾಗದ ಶಾಲೆಗಳ ಗುಣಮಟ್ಟ ಹೆಚ್ಚಿಸಲು ಮೀಸಲಿಡಿ: ಉದ್ಯಮಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ

    By adminNovember 30, 2023No Comments2 Mins Read
    dk shivakumar

    ಬೆಂಗಳೂರು: “ನಮ್ಮ ರಾಜ್ಯದಲ್ಲಿ ಹೊಸ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದ್ದೇವೆ. ಗ್ರಾಮೀಣ ಭಾಗದ ಶಾಲೆಗಳ ಗುಣಮಟ್ಟ ಸುಧಾರಣೆಗೆ ಸಿಎಸ್ಆರ್ ನಿಧಿಯನ್ನು ಮೀಸಲಿಡಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಉದ್ಯಮಿಗಳಿಗೆ ಕರೆ ನೀಡಿದರು.

    ಬೆಂಗಳೂರು ಮುಖ್ಯ ಅರಮನೆಯಲ್ಲಿ ನಡೆದ ಬೆಂಗಳೂರು ಟೆಕ್ ಸಮ್ಮೇಳನದಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,“ಗ್ರಾಮೀಣ ಭಾಗದ ಶಾಲೆಗಳ ಗುಣಮಟ್ಟ ಹೆಚ್ಚಿದರೆ ಆ ಭಾಗದ ಮಕ್ಕಳು ಕೂಡ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ನೆರವಾಗುತ್ತದೆ. ಈ  ಬಗ್ಗೆ ಪ್ರೇಮ್ ಜೀ ಸೇರಿದಂತೆ ಹಲವರ ಜತೆ ಚರ್ಚೆ ಮಾಡಿದ್ದು, ಈಗಾಗಲೇ 2 ಸಾವಿರ ಕೋಟಿ ಹಣವನ್ನು ಈ ಉದ್ದೇಶಕ್ಕೆ ನೀಡಲು ಅವರು ಮುಂದಾಗಿದ್ದಾರೆ. ನಾವೆಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎಂದು ಡಿಕೆಶಿ ಕರೆ ನೀಡಿದರು.

    ರಾಜ್ಯದಲ್ಲಿ ನೂತನ ಜೈವಿಕ ತಂತ್ರಜ್ಞಾನ ನೀತಿಯನ್ನು ರೂಪಿಸಲಾಗಿದೆ. ಆದರೂ ಉದ್ಯಮದಾರರಿಗೆ ರಾಜ್ಯ ಸರ್ಕಾರ ಯಾವ ಸವಲತ್ತು ಹಾಗೂ ಪ್ರೋತ್ಸಾಹ ಸಿಗುತ್ತದೆ ಎಂಬುದು ಮುಖ್ಯವಾಗುತ್ತದೆ.

    ಉದ್ಯಮಿಗಳು, ಬಂಡವಾಳ ಹೂಡಿಕೆದಾರರು ಬಲಿಷ್ಠವಾದರೆ, ಸರ್ಕಾರ ಬಲಿಷ್ಠವಾಗುತ್ತದೆ. ನೀವು ದುರ್ಬಲರಾದರೆ ನಾವು ದುರ್ಬಲವಾಗುತ್ತೇವೆ. ನೀವು ಆರ್ಥಿಕವಾಗಿ ಸಧೃಡವಾದರೆ ರಾಜ್ಯ ಕೂಡ ಆರ್ಥಿಕವಾಗಿ ಸಧೃಡವಾಗುತ್ತದೆ ಎಂದು ನಾವು ನಂಬಿದ್ದೇವೆ. ನಾನು ಬಹಳ ವರ್ಷಗಳಿಂದ ಸಚಿವನಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಮೊದಲ ಬಾರಿಗೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವದಲ್ಲಿ ಪಾಲ್ಗೊಂಡ ನಾರಾಯಣ ಮೂರ್ತಿ ಹಾಗೂ ಅಜೀಂ ಪ್ರೇಮ್ ಜಿ ಅವರು ಇದಕ್ಕೆ ದೇಶದಲ್ಲೇ ಒಂದು ಹೊಸ ರೂಪ ನೀಡಿದರು.

    ನಂತರ ವಿಶ್ವದ ಪ್ರಮುಖ ನಾಯಕರು ಬೆಂಗಳೂರಿಗೆ ಬರಲು ಆರಂಭಿಸಿದರು. ಬೆಂಗಳೂರಿಗೆ ಸಾವಿರಾರು ಬಹುರಾಷ್ಟ್ರೀಯ ಕಂಪನಿಗಳು ಕಾಲಿಟ್ಟವು. ಅವರು ಇಲ್ಲಿ ವ್ಯಾಪಾರ ವ್ಯವಹಾರ ಮಾಡುತ್ತಿದ್ದಾರೆ. ನಾನು ಅಜೀಂ ಪ್ರೇಮ್ ಜೀ ಅವರ ಜತೆ ಚರ್ಚೆ ಮಾಡುವಾಗ ಅವರು ಒಂದು ವಿಚಾರ ಹೇಳಿದರು. ನಮ್ಮಲ್ಲಿ 5 ಮಿಲಿಯನ್ (50 ಲಕ್ಷ) ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅದರಲ್ಲಿ 2 ಮಿಲಿಯನ್ ನಷ್ಟು ಐಟಿ ಉದ್ಯೋಗಸ್ಥರು ಬೆಂಗಳೂರಿನಲ್ಲಿದ್ದಾರೆ.

    ತಂತ್ರಜ್ಞಾನದ ಬೆಳವಣಿಗೆಯಲ್ಲಿ ಬೆಂಗಳೂರು ಜಾಗತಿಕ ಮಟ್ಟದಲ್ಲೇ ತನ್ನದೇ ಆದ ಹೆಸರು ಸಂಪಾದಿಸಿದೆ. ನಮ್ಮಲ್ಲಿ 300ಕ್ಕೂ ಹೆಚ್ಚು ಇಂಜಿನಿಯರಿಂಗ್ ಕಾಲೇಜುಗಳು ಬೆಂಗಳೂರಿನಲ್ಲಿವೆ. ಇಡೀ ರಾಜ್ಯದಲ್ಲಿ 70ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳಿವೆ. ಈ ದೇಶದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಮಾನವಸಂಪನ್ಮೂಲ ಉತ್ಪಾದನೆ ಬೇರೆ ಯಾವುದೇ ರಾಜ್ಯಗಳಲ್ಲಿ ಆಗುತ್ತಿಲ್ಲ. ಆ ಮೂಲಕ ಇಡೀ ವಿಶ್ವಕ್ಕೆ ಶಕ್ತಿ ನೀಡುತ್ತಿದ್ದೇವೆ ಎಂದರು.

    ನಮ್ಮ ಮಕ್ಕಳು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುತ್ತಿದ್ದಾರೆ. ನಾವು ನಿಮ್ಮೆಲ್ಲರಿಗೂ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡುತ್ತೇವೆ. ನಮ್ಮ ರಾಜ್ಯದಲ್ಲಿ ತಾಂತ್ರಿಕ ವಿಚಾರವಾಗಿ ಕ್ಷಮತೆ ಹೊಂದಿರುವ ಮಾನವ ಸಂಪನ್ಮೂಲವಿದೆ ಎಂಬ ಭರವಸೆಯನ್ನು ನಾನು ನೀಡಬಲ್ಲೆ. ನಿಮ್ಮಲ್ಲಿ ಏನಾದರೂ ಸಮಸ್ಯೆ, ತೊಂದರೆ ಇದ್ದರೆ ಅವುಗಳನ್ನು ಹೇಳಿ. ನಾವು ನಿಮ್ಮ ಜತೆ ಕೈಜೋಡಿಸಿ ಕೆಲಸ ಮಾಡುತ್ತೇವೆ. ನೀವು ಉದ್ಯೋಗ ಸೃಷ್ಟಿಸಿ, ತೆರಿಗೆ ಪಾವತಿಸಿ ರಾಜ್ಯಕ್ಕೆ ಶಕ್ತಿ ತುಂಬುತ್ತಿದ್ದೀರಿ. ದೇಶದ ತೆರಿಗೆ ಪಾವತಿಯಲ್ಲಿ ಕರ್ನಾಟಕ ಶೇ.37ರಷ್ಟು ಪಾಲನ್ನು ಹೊಂದಿದ್ದು, ಈ ಶಕ್ತಿಯನ್ನು ನೀವು ತುಂಬಿದ್ದೀರಿ. ಪ್ರಿಯಾಂಕ್ ಖರ್ಗೆ ಅವರ ನೇತೃತ್ವದಲ್ಲಿ ಈ ಟೆಕ್ ಸಮಿಟ್ ನಡೆದಿದ್ದು, ಅವರು ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅವರು ಬಹಳ ಉತ್ಸುಕತೆಯಿಂದ ಈ ಇಲಾಖೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಈ ಬೆಂಗಳೂರಿನ ಸಮ್ಮೇಳನದಲ್ಲಿ ನೀವು ನಿಮ್ಮ ಅಭಿಪ್ರಾಯ, ಆಲೋಚನೆ, ಸಮಸ್ಯೆ ಎಲ್ಲವನ್ನು ಹಂಚಿಕೊಳ್ಳಿ. ನಾವು ಅದನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇವೆ.ಮಾಹಿತಿ ತಂತ್ರಜ್ಞಾನ ನೀತಿ ರೂಪಿಸಿದ ಮೊದಲ ರಾಜ್ಯ ಕರ್ನಾಟಕ. ಈಗ ನಾವು ಜೈವಿಕ ಇಂಧನ, ಅನ್ವೇಷಣಾ ನೀತಿಯನ್ನು ರೂಪಿಸಿದ್ದೇವೆ. ಈ ಸಮ್ಮೇಳನದಲ್ಲಿ ನಿಮ್ಮ ಸಲಹೆಗಳನ್ನು ನಾವು ನಿರೀಕ್ಷಿಸುತ್ತೇವೆ. ನಾವು ನಿಮ್ಮ ಜತೆ ಇರುತ್ತೇವೆ ಎಂಬ ವಾಗ್ದಾನ ನೀಡುತ್ತಾ ನಿಮ್ಮೆಲ್ಲರಿಗೂ ಶುಭ ಕೋರುತ್ತೇನೆ.”ಎಂದರು.

    admin
    • Website

    Related Posts

    ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?

    September 15, 2026

    ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

    September 15, 2026

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?

    September 15, 2026

    ಬಿಗ್‌ ಬಾಸ್‌ ಕನ್ನಡ ಸೀಸನ್‌ 13 ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ನಟ ಹಾಗೂ ನಿರ್ದೇಶಕ ಓಂ ಪ್ರಕಾಶ್‌ ರಾವ್…

    ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

    September 15, 2026

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026

    ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ

    September 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.