nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    • ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
    • ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    • ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    ಜಿಲ್ಲಾ ಸುದ್ದಿ April 14, 2026

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    By adminApril 14, 2026No Comments2 Mins Read
    sathish jarakiholi

    ಬೆಳಗಾವಿ: ರಾಜ್ಯದ ಪರಿಶಿಷ್ಟ ಜಾತಿ/ಪಂಗಡಗಳ ಜನರಿಗೆ ಖಾಸಗಿ ಬಡಾವಣೆ ಮಾದರಿಯಲ್ಲಿ ಸಕಲ ಮೂಲಸೌಕರ್ಯ ಹೊಂದಿರುವ ಬಡಾವಣೆ ಅಭಿವೃದ್ಧಿಪಡಿಸಿ ನೀವೇಶನಗಳನ್ನು ಹಂಚಿಕೆ ಮಾಡಲು “ಬುದ್ಧ, ಬಸವ, ಅಂಬೇಡ್ಕರ್ ನಿವೇಶನ ಹಂಚಿಕೆ” ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

    ಡಾ.ಬಾಬಾಸಾಹೇಬ್ ಜನ್ಮದಿನಾಚರಣೆ ಅಂಗವಾಗಿ ನಗರದ ಡಾ.ಅಂಬೇಡ್ಕರ್ ಉದ್ಯಾನದಲ್ಲಿ ಡಾ.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.


    Provided by
    Provided by

    ಸುಮಾರು 20 ವರ್ಷಗಳಿಂದ ಎಸ್.ಸಿ/ಎಸ್. ಟಿ ಸಮುದಾಯದವರಿಗೆ ನಿವೇಶನ ಮಂಜೂರು ಮಾಡಲಾಗುತ್ತಿದೆ. ಆದರೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುತ್ತಿರಲಿಲ್ಲ. ಹಾಗಾಗಿ ರಸ್ತೆ, ನೀರು, ವಿದ್ಯುತ್ ಸಂಪರ್ಕ ಸೇರಿದಂತೆ ಸಕಲ ಮೂಲಸೌಕರ್ಯ ಹೊಂದಿರುವ ಬಡಾವಣೆಗಳನ್ನು ಲೋಕೋಪಯೋಗಿ ಇಲಾಖೆಯಿಂದ ಅಭಿವೃದ್ಧಿಪಡಿಸುವಂತಹ ಯೋಜನೆಯನ್ನು ದೇಶದಲ್ಲಿ ಪ್ರಪ್ರಥಮ ಬಾರಿಗೆ ಕರ್ನಾಟಕ ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಚಿವ ಜಾರಕಿಹೊಳಿ ತಿಳಿಸಿದರು.

    ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಿಂದ ಸುಮಾರು 20 ಕೋಟಿ ಅನುದಾನ ಬಳಕೆ ಮಾಡಿಕೊಂಡು “ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ” ಯೋಜನೆ ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಮಾಡಲಾಗುವುದು.  ಫಲಾನುಭವಿಗಳ ಆಯ್ಕೆ ಮತ್ತು ನಿವೇಶನ ಹಂಚಿಕೆಯು ಸದ್ಯಕ್ಕೆ ಜಾರಿಯಲ್ಲಿರುವ ನಿಯಮಗಳ ಪ್ರಕಾರ ಆಯಾ ಗ್ರಾಮ ಪಂಚಾಯತಿ ಮತ್ತು ಸ್ಥಳೀಯ ಸಂಸ್ಥೆಗಳು ನಡೆಸಲಿದ್ದು, ಲೋಕೋಪಯೋಗಿ ಇಲಾಖೆಯು ನಿಗದಿಪಡಿಸಿದ ಜಾಗದಲ್ಲಿ ಕೇವಲ ಬಡಾವಣೆಗಳನ್ನು ಅಭಿವೃದ್ಧಿಪಡಿಸಿ ಸಂಬಂಧಿಸಿದ ಪಂಚಾಯತಿ ಅಥವಾ ನಗರ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಲಿದೆ.  ಫಲಾನುಭವಿಗಳ ಆಯ್ಕೆ ಅಥವಾ ಹಂಚಿಕೆಯಲ್ಲಿ ಲೋಕೋಪಯೋಗಿ ಇಲಾಖೆಯ ಪಾತ್ರವಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

    ಒಂದು ಸಾವಿರ ಎಕರೆ ಅಭಿವೃದ್ಧಿ:

    ಪ್ರಾಯೋಗಿಕವಾಗಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದ್ದು, ಸಾಧಕ-ಬಾಧಕಗಳನ್ನು ಪರಿಶೀಲಿಸಿ ರಾಜ್ಯದಾದ್ಯಂತ ಒಂದು ಸಾವುರ ಎಕರೆ ಜಾಗೆಯಲ್ಲಿ ಬಡಾವಣೆ ಅಭಿವೃದ್ಧಿಪಡಿಸಲಾಗುವುದು ಎಂದು ಸಚುವ ಸತೀಶ್ ಜಾರಕಿಹೊಳಿ ಹೇಳಿದರು.

    ಸದ್ಯಕ್ಕೆ ಮೊದಲ ಹಂತದಲ್ಲಿ ಸುಮಾರು 42 ಎಕರೆಯಲ್ಲಿ ಮೈಸೂರು, ಬೆಳಗಾವಿ ಜಿಲ್ಲೆಯ ಪಾಶ್ಚಾಪುರ ಗ್ರಾಮ ಪಂಚಾಯಿತಿಯ ಗುಮಚನಮರಡಿ; ಹುಕ್ಕೇರಿ ತಾಲೂಕಿನ ಹರಗಾಪುರ;  ಮೂಡಲಗಿ ತಾಲೂಕಿನ ಅರಬಾವಿ, ಸವದತ್ತಿ; ಬಳ್ಳಾರಿ ಜಿಲ್ಲೆಯ ಕುರುಗೋಡು ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಳಿಮಾವು ಗ್ರಾಮ ಪಂಚಾಯತಿ ವ್ಯಾಪ್ತಿಯ ಬೊಕ್ಕಹಳ್ಳಿಯಲ್ಲಿ ಬಡಾವಣೆ ನಿರ್ಮಾಣದ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.

    ಬಡಾವಣೆ ನಿರ್ಮಾಣದ ಯೋಜನಾ ಪ್ರದೇಶದ ವಿಸ್ತೀರ್ಣಕ್ಕೆ ಅನುಗುಣವಾಗಿ ನಿವೇಶನ, ರಸ್ತೆ, ಚರಂಡಿ, ಓವರ್ ಹೆಡ್ ಟ್ಯಾಂಕ್, ಬೀದಿ ದೀಪ, ಕುಡಿಯುವ ನೀರು ಸರಬರಾಜು, ಪಾರ್ಕಿಂಗ್ ಗಳಿಗೆ ನಕ್ಷೆಯನ್ನು ತಯಾರಿಸಿಕೊಂಡು ನಿವೇಶನ ರಚನೆಗೆ ಅವಶ್ಯವಿರುವ ಸಕ್ಷಮ ಪ್ರಾಧಿಕಾರಗಳಿಂದ ಅನುಮೋದನೆ ಪಡೆದುಕೊಳ್ಳುಲಾಗುವುದು.

    ಸದ್ಯ ಬಡಾವಣೆ ನಿರ್ಮಾಣ ಯೋಜನೆ ಯಶಸ್ವಿಗೊಂಡ ಬಳಿಕ ರಾಜ್ಯದಲ್ಲಿ ವಿವಿಧೆಡೆ ಅಂದಾಜು ಸಾವಿರ ಎಕರೆ ವಿಸ್ತೀರ್ಣದಲ್ಲಿ ಬಡಾವಣೆ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು. ಸರ್ಕಾರ ಈಗಾಗಲೇ ನಿವೇಶನಗಳನ್ನು ನೀಡಿದ್ದು, ಎರಡನೇ ಹಂತದಲ್ಲಿ ಅಗತ್ಯಕ್ಕೆ ತಕ್ಕಂತೆ ಖಾಸಗಿ ಜಮೀನು ಖರೀದಿಸಿ ಬಡಾವಣೆ ನಿರ್ಮಾಣ ಮಾಡಲಾಗುವುದು.

    ನಗರಸಭೆ, ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಯೋಜನೆ ಅನುಷ್ಠಾನಕ್ಕೆ ಕ್ರಮ ವಹಿಸಲಾಗಿದೆ. ಸದ್ಯದಲ್ಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಸಚಿವ ಜಾರಕಿಹೊಳಿ‌ ವಿವರಿಸಿದರು.

    ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 29, 2026

    ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್‌ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ

    May 29, 2026

    ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!

    May 27, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ(5 ರಿಂದ 10ನೇ ತರಗತಿ) ಹಾಗೂ…

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.