ಹೈದರಾಬಾದ್ : ಅಲ್ಲು ಅರ್ಜುನ್ ಅವರ ಹೈದರಾಬಾದ್ ನಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿರುವ ಘಟನೆಯ ಬಳಿಕ ಅಲ್ಲು ಅರ್ಜುನ್ ತಮ್ಮ ಕುಟುಂಬದೊಂದಿಗೆ ಮನೆ ಬಿಟ್ಟು ತೆರಳಿದ್ದಾರೆ ಎಂದು ಹೇಳಲಾಗಿದೆ.
ಅಲ್ಲು ಅರ್ಜುನ್ ನಿವಾಸಕ್ಕೆ ಇಸ್ಮಾನಿಯಾ ಯೂನಿವರ್ಸಿಟಿ ಜಾಯಿಂಟ್ ಆ್ಯಕ್ಷನ್ ಕಮಿಟಿಯವರು ಈ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಈ ದಾಳಿ ಬಳಿಕ ಅಲ್ಲು ಅರ್ಜುನ್ ಭಯಗೊಂಡಿದ್ದಾರೆ. ಅಲ್ಲು ಅರ್ಜುನ್ ಮಕ್ಕಳಾದ ಅಲ್ಲು ಅರ್ಹಾ, ಅಲ್ಲು ಅಯಾನ್ ಕಾರು ಹತ್ತಿ ವೇಗವಾಗಿ ಹೊರಟಿದ್ದಾರೆ.
ಅಲ್ಲು ಅರ್ಜುನ್ ಅವರಿಗೆ ಈ ವರ್ಷ ‘ಪುಷ್ಪ 2’ ಚಿತ್ರದ ಮೂಲಕ ದೊಡ್ಡ ಯಶಸ್ಸು ಸಿಕ್ಕಿತ್ತು. ಆದರೆ, ಚಿತ್ರ ಪ್ರದರ್ಶನ್ ವೇಳೆ ನಡೆದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಅವರ ತಲೆಗೆ ಸುತ್ತಿದೆ.
ಅಲ್ಲು ಅರ್ಜುನ್ ಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಆದರೂ ಅವರು ಜೈಲು ಸೇರುವ ಭೀತಿಯಲ್ಲಿದ್ದಾರೆ. ಹೀಗಾಗಿ ಅಲ್ಲು ಅರ್ಜುನ್ ಸಾಕಷ್ಟು ಎಚ್ಚರಿಕೆಯಿಂದ ಹೆಜ್ಜೆಯಿಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx