ಕುಣಿಗಲ್: ಸುಳ್ಳು ಹೇಳುವುದರಲ್ಲಿ ಮತ್ತು ಅಳುವುದರಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ನಿಸ್ಸೀಮರು. ಜನರ ಅನುಕಂಪ ಗಿಟ್ಟಿಸಿಕೊಳ್ಳಲು ಅವರು ಅಳುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ತಾಲ್ಲೂಕಿನ ಎಡೆಯೂರಿನಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಜನಾಭಿಪ್ರಾಯವಿದ್ದರೆ ಅಧಿಕಾರದಲ್ಲಿರಬೇಕು. ಇಲ್ಲವಾದರೆ ಮನೆಯಲ್ಲಿರಬೇಕು. ಅದುಬಿಟ್ಟು ಸಭೆಯಲ್ಲಿ ಕಣ್ಣೀರು ಹಾಕುವುದು ಸರಿಯಲ್ಲ. ಜೆಡಿಎಸ್ ದೇವೇಗೌಡರ ಕುಟುಂಬದ ಪಕ್ಷವಾಗಿದ್ದು, ಅವಕಾಶವಾದಿ ರಾಜಕಾರಣ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಕೋಮವಾದಿ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಲು ಜೆಡಿಎಸ್ ಜತೆ ಸೇರಿ ಸರ್ಕಾರ ರಚಿಸಲಾಗಿತ್ತು. ಆದರೆ ಶಾಸಕರು, ಸಚಿವರನ್ನು ಕುಮಾರಸ್ವಾಮಿ ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ‘ಆಪರೇಷನ್ ಕಮಲ’ಕ್ಕೆ ಸರ್ಕಾರ ಬಲಿಯಾಯಿತು. ಇದೀಗ ಸಿದ್ದರಾಮಯ್ಯ ಅವರಿಂದ ಸರ್ಕಾರ ಉರುಳಿತು ಎಂದು ಈಗ ಸುಳ್ಳು ಹೇಳುತ್ತಿದ್ದಾರೆ ಎಂದು ಹೇಳಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700