ತುಮಕೂರು: ನೊಂದವರು ಹಾಗೂ ಸಂಕಷ್ಟದಲ್ಲಿರುವ ಜನರ ಪರವಾಗಿ ಸೇವೆ ಸಲ್ಲಿಸಲು ಸದಾ ಸಿದ್ಧನಿದ್ದೇನೆ. ಧಾರ್ಮಿಕ ಕಾರ್ಯಗಳು ಹಾಗೂ ಗ್ರಾಮದ ಯಾವುದೇ ಸಮಸ್ಯೆಗಳ ಪರಿಹಾರಕ್ಕೆ ಮುಂದೆಯೂ ಗ್ರಾಮಸ್ಥರೊಂದಿಗೆ ಕೈಜೋಡಿಸುತ್ತೇನೆ ಎಂದು ಒಬಿಸಿ ಮೋರ್ಚಾದ ಮಾಜಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಹಾಗೂ ಸಮಾಜ ಸೇವಕ ಎಸ್.ಪಿ. ಚಿದಾನಂದ ಭರವಸೆ ನೀಡಿದರು.
ತಾಲ್ಲೂಕಿನ ಅಣ್ಣೇನಹಳ್ಳಿ ಗ್ರಾಮದಲ್ಲಿ ನಡೆದ ಶ್ರೀ ಉಡಸಲಮ್ಮ ದೇವಿಯ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಭಾಗವಹಿಸಿ, ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ವಿಶೇಷ ಆಹ್ವಾನಿತರಾಗಿ ಆಗಮಿಸಿದ ಎಸ್.ಪಿ. ಚಿದಾನಂದ ಅವರು ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ದೇಣಿಗೆ ನೀಡಿ ಸಹಕರಿಸಿದರು.
ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಎಸ್.ಪಿ. ಚಿದಾನಂದ ಅವರಿಗೆ ಪೇಟ ತೊಡಿಸಿ, ಹಾರ ಹಾಕಿ, ಫಲತಾಂಬೂಲ ನೀಡಿ ಆತ್ಮೀಯವಾಗಿ ಸನ್ಮಾನಿಸಿದರು.
ನಂತರ ಮಾತನಾಡಿದ ಅವರು, ತಾಯಿ ಉಡಸಲಮ್ಮ ದೇವಿಯ ಆಶೀರ್ವಾದ ಸಮಸ್ತ ಗ್ರಾಮಸ್ಥರು ಹಾಗೂ ಭಕ್ತಾದಿಗಳ ಮೇಲೆ ಸದಾ ಇರಲಿ. ಎಲ್ಲರಿಗೂ ಸುಖ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಗ್ರಾಮದ ಹಿರಿಯರು ಹಾಗೂ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
