ಕಳೆದ ವರ್ಷ ದೀಪಾವಳಿ ಹಬ್ಬಕ್ಕೆ ಬಿಡುಗಡೆಯಾಗಿದ್ದ ತಮಿಳಿನ ಅಮರನ್ ಸಿನಿಮಾ 300 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಸೂಪರ್ ಹಿಟ್ ಆಗಿತ್ತು. ಬಳಿಕ ಒಟಿಟಿಗೂ ಎಂಟ್ರಿಕೊಟ್ಟು ಅಲ್ಲೂ ಹೆಚ್ಚು ಜನರಿಂದ ವೀಕ್ಷಣೆ ಪಡೆದುಕೊಂಡಿತ್ತು. ತಮಿಳು, ಕನ್ನಡ, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಇದೀಗ ಕಿರುತೆರೆಗೆ ಬರಲಿದೆ.
ಚಿತ್ರಮಂದಿರಗಳಲ್ಲಿ ಹಾಗೂ ಒಟಿಟಿಯಲ್ಲಿ ಸಿನಿಮಾ ವೀಕ್ಷಣೆ ಮಾಡಲು ಸಾಧ್ಯವಾಗದವರು ಇದೀಗ ಮನೆಯಲ್ಲೇ ಟಿವಿಯಲ್ಲಿ ನೋಡಬಹುದಾಗಿದೆ. ಕನ್ನಡದಲ್ಲಿ ಈ ಸಿನಿಮಾದ ಸ್ಯಾಟಲೈಟ್ ಹಕ್ಕನ್ನು ಸ್ಟಾರ್ ಸುವರ್ಣ ಪಡೆದುಕೊಂಡಿದೆ. ಇದೇ ಜನವರಿ 14ರಂದು ಸಂಜೆ 5:30ಕ್ಕೆ ಈ ಸಿನಿಮಾ ಪ್ರದರ್ಶನಗೊಳ್ಳಲಿದೆ.
ಈ ಸಿನಿಮಾವನ್ನು ಕಮಲ್ ಹಾಸನ್ ತಮ್ಮ ರಾಜ್ ಕಮಲ್ ಇಂಟರ್ ನ್ಯಾಷನಲ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ನಾಯಕ ನಟರಾಗಿ ಶಿವ ಕಾರ್ತಿಕೇಯನ್, ನಾಯಕಿಯಾಗಿ ಸಾಯಿ ಪಲ್ಲವಿ ನಟಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx