ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹವನ್ನು ಅದ್ಧೂರಿಯಾಗಿ ನಡೆಸಿ ವಿಶ್ವದ ಗಮನ ಸೆಳೆಯುವಂತೆ ಮಾಡಿದ್ದ ರಿಲಯನ್ಸ್ ಉದ್ಯಮಿ ಮುಕೇಶ್ ಅಂಬಾನಿ 2024ರ ಕೇಂದ್ರ ಬಜೆಟ್ ಮಂಡನೆಯಾದ ದಿನ ಷೇರು ಮಾರುಕಟ್ಟೆಯಲ್ಲಿ ಆದ ಏರುಪೇರಿನಿಂದಾಗಿ ಬರೋಬ್ಬರಿ 9,200 ಕೋಟಿ ರೂ. ಕಳೆದುಕೊಂಡಿದ್ದಾರೆ.
ಕೇಂದ್ರ ಬಜೆಟ್ ದಿನ ಷೇರು ಮಾರುಕಟ್ಟೆಯು ಸಣ್ಣ ಕುಸಿತದೊಂದಿಗೆ ಕ್ಲೋಸ್ ಆಗಿತ್ತು. ಆದರೆ ಇದು ವಹಿವಾಟಿನ ವೇಳೆ ಬಹುದೊಡ್ಡ ಪರಿಣಾಮವನ್ನು ಬೀರಿತ್ತು. ಈ ಸಂದರ್ಭದಲ್ಲಿ ವಹಿವಾಟಿನಲ್ಲಿ ಗಮನಾರ್ಹವಾದ ಏರಿಳಿತಗಳು ಕಂಡುಬಂದವು. ಕೆಲವು ಷೇರುಗಳು ತೀವ್ರವಾಗಿ ಕುಸಿದರೆ ಇನ್ನು ಸಣ್ಣ ಪ್ರಮಾಣದಲ್ಲಿ ಏರಿಕೆ ಕಂಡವು. ಇದು ದೇಶದ ದೊಡ್ಡ ಬಿಲಿಯನೇರ್ ಗಳ ಸಂಪತ್ತಿನ ಮೇಲೆ ಭಾರೀ ಪರಿಣಾಮವನ್ನು ಬೀರಿತು.
ಏಷ್ಯಾದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಅವರ ನಿವ್ವಳ ಮೌಲ್ಯದಲ್ಲಿ ಈ ದಿನ ಗಣನೀಯ ಇಳಿಕೆಯಾಗಿದೆ. ಬಜೆಟ್ ದಿನದಂದು, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಏರುವ ನಿರೀಕ್ಷೆ ಇತ್ತು. ಇದರಿಂದ ಮುಕೇಶ್ ಅಂಬಾನಿ ಅವರ ನಿವ್ವಳ ಮೌಲ್ಯವನ್ನು ಹೆಚ್ಚಾಗುತ್ತದೆ ಎಂದೇ ಭಾವಿಸಲಾಗಿತ್ತು. ಆದರೆ ಮಾರುಕಟ್ಟೆಯಲ್ಲಿ ಇದು ವ್ಯತಿರಿಕ್ತ ಪರಿಣಾಮ ಬೀರಿತು.
ಕಳೆದ ಕೆಲವು ದಿನಗಳಲ್ಲಿ ಅಂಬಾನಿ ಅವರ ನಿವ್ವಳ ಮೌಲ್ಯವು 7 ಶತಕೋಟಿ ಡಾಲರ್ ಗಿಂತ ಕಡಿಮೆಯಾಗಿದೆ. ಜುಲೈ 19ರಂದು ಅವರ ನಿವ್ವಳ ಮೌಲ್ಯವು 119 ಶತಕೋಟಿ ಡಾಲರ್ ಆಗಿತ್ತು. ಆದರೆ ಅದು ಈಗ 112 ಶತಕೋಟಿ ಡಾಲರ್‌ಗೆ ಇಳಿದಿದೆ ಎನ್ನಲಾಗಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಇತ್ತೀಚೆಗೆ ಕುಸಿಯುತ್ತಲೇ ಇದ್ದು, ಮುಂದಿನ ದಿನಗಳಲ್ಲಿ ಅಂಬಾನಿ ಸಂಪತ್ತಿನಲ್ಲಿ ಮತ್ತಷ್ಟು ಕುಸಿತ ಉಂಟಾಗಬಹುದು ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA