ತುಮಕೂರು: ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆದರ್ಶವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳುವುದರ ಮೂಲಕ ಸಮಾನತೆಯ ಬದುಕನ್ನು ನಡೆಸಬೇಕೆಂದು ಕರ್ನಾಟಕ ರಾಜ್ಯ ಸ್ವಾಭಿಮಾನಿ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಬಂಡೆ ಕುಮಾರ್ ತಿಳಿಸಿದರು.
ನಗರದ ಗುಂಚಿ ವೃತ್ತದಲ್ಲಿ ದಲಿತ ಪರ ಸಂಘಟನೆಗಳ ವತಿಯಿಂದ ಆಯೋಜಿಸಲಾಗಿದ್ದ ಬಾಬಾಸಾಹೇಬ್ ಅಂಬೇಡ್ಕರ್ ರವರ 65ನೇ ಪರಿನಿಬ್ಬಾಣ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಸಮಾನತೆಯ ಸಾಮಾಜಿಕ ಹರಿಕಾರರಾದ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಬದುಕು ಅನುಕರಣೀಯ ಮತ್ತು ಆದರ್ಶಪ್ರಾಯವಾಗಿದೆ. ಅವರ ಜೀವನದ ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡು ಸಮಾಜದಲ್ಲಿ ಸಮಾನತೆ, ಶಾಂತಿ, ಭ್ರಾತೃತ್ವದ ಭಾವನೆಯಿಂದ ಬದುಕಬೇಕು. ಸಮಾಜದಲ್ಲಿನ ಅನಿಷ್ಠ ಪದ್ಧತಿಗಳನ್ನು ತೊಡೆದು ಹಾಕಿ, ಸರ್ವರೂ ಸಮಾನರು ಎಂದು ಭಾವಿಸಿದಾಗ ಅಂಬೇಡ್ಕರ್ ರವರ ಕನಸು ಈಡೇರಿಸಿದಂತಾಗುತ್ತದೆ ಎಂದರು.
ಸಂವಿಧಾನವು ಅತ್ಯಂತ ಮಹತ್ವ ಮತ್ತು ಪವಿತ್ರವಾದದ್ದು, ಅದರ ಆಶಯಗಳಿಗನುಗುಣವಾಗಿ ಪ್ರತಿಯೊಬ್ಬ ನಾಗರಿಕರು ಸಹ ದೇಶದಲ್ಲಿ ಬದುಕ ಬೇಕಾದದ್ದು ಅವರ ಕರ್ತವ್ಯವಾಗಿದೆ. ಸಂವಿಧಾನದ ಮೌಲ್ಯವನ್ನು ಎತ್ತಿ ಹಿಡಿಯುವುದು, ಪ್ರತೀ ಭಾರತೀಯನ ಕರ್ತವ್ಯವಾದ್ದರಿಂದ ಅದನ್ನು ರಕ್ಷಿಸುವ ಮತ್ತು ಪಾಲಿಸುವ ಹೊಣೆ ನಮ್ಮ ಮೇಲಿದೆ ಎಂದು ತಿಳಿಸಿದರು.
ವರದಿ: ರಾಜೇಶ್ ರಂಗನಾಥ್
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700