ಬೆಳಗಾವಿ: ಪುಣೆಯ ಕಾರ್ಯಕ್ರಮಕ್ಕೆ ತೆರಳುವ ವೇಳೆ ತೆರಳುತ್ತಿರುವಾಗ ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಮುಖಕ್ಕೆ ವ್ಯಕ್ತಿಯೊಬ್ಬರು ಮಸಿ ಎರಚಿದ ಘಟನೆ ನಿನ್ನೆ ನಡೆದಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಪುಣೆ ಮಹಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ಮಹಾತ್ಮಾ ಪುಲೆ, ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಚಂದ್ರಕಾಂತ ಪಾಟೀಲ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಈ ಸಂಬಂಧ ಉದ್ಧವ್ ಠಾಕ್ರೆ ಅವರ ಶಿವಸೇನೆ ಗುಂಪು ಕೂಡ ಕಾರ್ಯಕ್ರಮದ ಸ್ಥಳದ ಬಳಿ ಪ್ರತಿಭಟನೆ ನಡೆಸಿ ಚಂದ್ರಕಾಂತ್ ಪಾಟೀಲ್ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.
ಈ ಪ್ರತಿಭಟನೆಯಲ್ಲಿದ್ದ ಯುವಕನೋರ್ವ ಪಕ್ಕದಲ್ಲೇ ಬೆಂಗಾವಲು ಸಿಬ್ಬಂದಿಯಿದ್ದರೂ ಚಂದ್ರಕಾಂತ ಪಾಟೀಲರ ಮುಖಕ್ಕೆ ಮಸಿ ಎರಚಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಘಟನಾ ಸ್ಥಳದಲ್ಲಿದ್ದ ಪೊಲೀಸರು ಯುವಕ ಹಾಗೂ ಪ್ರತಿಭಟನೆಯಲ್ಲಿದ್ದು ಕೃತ್ಯದಲ್ಲಿ ಜೊತೆಗಿದ್ದ ಇನ್ನಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy