ತುಮಕೂರು: ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಅಳವಡಿಸಿದ್ದ ಫ್ಲೆಕ್ಸ್ ನ್ನು ಕಿಡಿಗೇಡಿಗಳು ಹರಿದು ಹಾಕಿದ್ದು, ಘಟನೆಯನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ತಿಪಟೂರು ತಾಲ್ಲೂಕಿನ ಕೆರೆಗೋಡಿಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಅಂಬೇಡ್ಕರ್ ಜಯಂತಿಯ ಶುಭಾಶಯ ಕೋರಿ ಹಾಕಲಾಗಿದ್ದ ಫ್ಲೆಕ್ಸ್ ನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಈ ಕೃತ್ಯವನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ತಿಪಟೂರು ಗ್ರಾಮಾಂತರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ, ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದುಕೊಳ್ಳಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5