ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ತುಮಕೂರು ಕಛೇರಿಯಲ್ಲಿ ಶುಕ್ರವಾರ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ್ ಆರ್. ರವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿದರು.
ಈ ಸಂದರ್ಭದಲ್ಲಿ ಪ್ರಾದೇಶಿಕ ಕೇಂದ್ರ ಸಿಬ್ಬಂದಿಗಳಾದ ತಬ್ರೇಜ್ ಖಾನ್, ಲಕ್ಷ್ಮಿಕಾಂತ್ ಜಿ.ಹೆಚ್. ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy