ತುಮಕೂರು: ಸಂವಿಧಾನ ಶಿಲ್ಪ, ಮಾನವತಾವಾದಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 134ನೇ ಜನ್ಮದಿನಾಚರಣೆಯಾದ ಇಂದು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ. ಐಪಿಎಸ್ ರವರು ಪುಷ್ಪಾರ್ಚನೆ ಮಾಡುವ ಮೂಲಕ ನೆರೆವೇರಿಸಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಬಿ.ಎಸ್. ಅಬ್ದುಲ್ ಖಾದರ್, ಸಿ.ಗೋಪಾಲ್ ರವರುಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಕಚೇರಿಯ ಆಡಳಿತಾಧಿಕಾರಿ ಶಿವಪ್ರಕಾಶ್ ಹಾಗೂ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4