ಸರಗೂರು: ಅಂಬೇಡ್ಕರ್ ಎಂದರೆ ಬರೀ ವ್ಯಕ್ತಿಯಲ್ಲ. ಅವರು ಮಹಾನ್ ಶಕ್ತಿ. ಧ್ಯೇಯ, ತತ್ವವೇ ಅಂಬೇಡ್ಕರ್ ಆಗಿದ್ದಾರೆ. ದೇಶದ ಅಖಂಡತೆಗೆ ಅವರ ಸೇವೆ ಅನನ್ಯವಾದುದು ಎಂದು ತಹಶೀಲ್ದಾರ್ ಮೋಹನಕುಮಾರಿ ತಿಳಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಆವರಣದಲ್ಲಿ ಶನಿವಾರದಂದು ತಾಲೂಕು ಆಡಳಿತ ತಾಲೂಕು ಪಂಚಾಯಿತಿ ಪಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರ 69 ನೇ ಮಹಾಪರಿನಿರ್ವಾಣ ದಿನದಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪೋಟೋ ದೀಪ ಬೆಳಗಿಸಿ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದರು.
ಅವರನ್ನು ಕೇವಲ ಶೋಷಿತ ವರ್ಗದ ನಾಯಕರು ಎಂದು ಭಾವಿಸುವಂತಿಲ್ಲ. ಅವರು ಸಮಾಜದ ಎಲ್ಲ ವರ್ಗಗಳ ನಾಯಕರಾಗಿದ್ದಾರೆ ಎಂದು ಹೇಳಿದರು.
ಅಂಬೇಡ್ಕರ್ ಅವರು ಸಂಘರ್ಷದ ಹಾದಿ ತುಳಿಯದೆ ಸಾಮರಸ್ಯದ ಮೂಲಕ ಸಮಾಜವು ಒಗ್ಗೂಡುವಂತೆ ಮಾಡಿದ್ದಾರೆ. ಅವರ ವ್ಯಕ್ತಿತ್ವ, ಆದರ್ಶಗಳನ್ನು ಪಾಲನೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಿದೆ ಎಂದರು.
ಅಂಬೇಡ್ಕರ್ ರಚಿಸಿದ ಸಂವಿಧಾನದಲ್ಲಿ ಎಲ್ಲರಿಗೂ ಹಕ್ಕು ಮತ್ತು ಜವಾಬ್ದಾರಿ ನೀಡಲಾಗಿದೆ. ನಾಗರಿಕರ ಹಕ್ಕುಗಳನ್ನು ಪ್ರತಿಪಾದಿಸುವುದರ ಜತೆಗೆ ಗುರುತರ ಜವಾಬ್ದಾರಿ ನಿರ್ವಹಿಸಬೇಕಿದೆ. ಯುವಜನರು ಸಂವಿಧಾನದ ಆಶಯಗಳನ್ನು ಅರ್ಥೈಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.
ಅಂಬೇಡ್ಕರ್ ಭವನ ಟ್ರಸ್ಟ್ ಅಧ್ಯಕ್ಷ ಎಸ್.ಡಿ.ಸಣ್ಣಸ್ವಾಮಿ ಮಾತನಾಡಿ, ಅಂಬೇಡ್ಕರ್ ಅವರ ಹೆಸರು ಹೇಳುವುದೇ ರೋಮಾಂಚನ ಉಂಟು ಮಾಡುತ್ತದೆ. ಸಮಾನತೆ ದೃಷ್ಟಿಯಲ್ಲಿ ಸಂವಿಧಾನ ರಚಿಸಿದ ಮಹಾನ್ ಚೇತನ. ನಾವೆಲ್ಲರೂ ಜೀವನದಲ್ಲಿ ಅವರ ಚಿಂತನೆ ಅಳವಡಿಸಿಕೊಳ್ಳಬೇಕಿದೆ’ ಎಂದರು.
ಡಾ.ಬಿ.ಆರ್. ಅಂಬೇಡ್ಕರ್ ವಿಶ್ವಕಂಡ ಮಹಾನ್ ಮಾನವತಾವಾದಿಯಾಗಿದ್ದಾರೆ. ಇವರನ್ನು ಒಂದೇ ಜಾತಿಯ ಚೌಕಟ್ಟಿನೊಳಗೆ ಬಂಧಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ತಿಳಿಸಿದರು.
ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಗೋಪಾಲಸ್ವಾಮಿ, ಮಹಾಸಭಾ ಅಧ್ಯಕ್ಷ ಇಟ್ನ ರಾಜಣ್ಣ ಮಾತನಾಡಿದರು.
ಈ ಸಂದರ್ಭದಲ್ಲೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭವನಕ್ಕೆ ನಿರ್ಮಾಣ ಮಾಡಲು ಕಂದಾಯ ಇಲಾಖೆಯಿಂದ ಜಾಗವನ್ನು ಗುರುತಿಸಿಕೊಂಡು ಬಿಡಗಲು ಗ್ರಾಮದ ಸರ್ವೆ ನಂ 6 ರಲ್ಲಿ 27 ಗುಂಟೆ ಜಾಗವನ್ನು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷೆ ಚೈತ್ರ ಸ್ವಾಮಿ, ಇಓ ಪ್ರೇಮ್ ಕುಮಾರ್, ಮುಖ್ಯಾಧಿಕಾರಿ ಎಸ್.ಕೆ.ಸಂತೋಷ ಕುಮಾರ್, ಮಾಜಿ ಜಿ.ಪಂ. ಸದಸ್ಯ ಚಿಕ್ಕವೀರನಾಯಕ, ಸುನೀಲ್ ಬೋಸ್ ಅಭಿಮಾನಿಗಳ ಬಳಗದ ತಾಲೂಕು ಅಧ್ಯಕ್ಷ ದೇವಲಾಪುರ ಸಿದ್ದರಾಜು,ಶಂಭುಲಿಂಗನಾಯಕ,ಕಸಾಪ ಅಧ್ಯಕ್ಷ ಕೆಂಡಗಣ್ಣಸ್ವಾಮಿ, ದಸಂಸ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಕೂಡಗಿ ಗೋವಿಂದರಾಜು,ಮಣಿಕಂಠ, ಗೇಟ್ 2 ತಹಶೀಲ್ದಾರ್ ಪರಶಿವಮೂರ್ತಿ, ಪಿಎಸ್ ಐ ಗೋಪಾಲ್, ಮುಖಂಡರು ಗ್ರಾಪಂ ಸದಸ್ಯ ನಂಜಯ್ಯ,ಬಿಲ್ಲಯ್ಯ, ಗ್ರಾಪಂ ಸದಸ್ಯ ರುದ್ರಯ್ಯ, ಸರಗೂರು ಕೃಷ್ಣ, ಹೂವಿನಕೊಳ ಮಹೇಂದ್ರ, ಸ್ವಾಮಿ, ಗೋವಿಂದ, ಅಣ್ಣಯ್ಯ ಸ್ವಾಮಿ, ಮಹೇಶ್,ದೇವರಾಜು, ಶಿವರಾಜು,ಶಿರಮ್ಮ, ಕಳಸೂರು ಬಸವರಾಜು, ಮುಳ್ಳೂರು ಲೋಕೇಶ್,ಸಮಾಜ ಕಲ್ಯಾಣ ಇಲಾಖೆ ಗುಣಧಾರ್, ಆಶಿಶ್ , ಮಹದೇವಸ್ವಾಮಿ,ಸಿಬ್ಬಂದಿ ವರ್ಗದವರು ಸುನೀಲ್, ಮನೋಹರ್,ಮುಜೀಬ್, ರವಿಚಂದ್ರನ್, ಶ್ರೀನಿವಾಸ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


