ತಿಪಟೂರು: ತಾಲೂಕಿನ ಹೊನ್ನವಳ್ಳಿ ಹೋಬಳಿಯ ಮಣಿಕಿಕೆರೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ ಭವನಕ್ಕೆ ಎಂದು ಮೀಸಲಿಟ್ಟ ಜಾಗದಲ್ಲಿ ಹಾಕಲಾಗಿದ್ದ ನಾಮಫಲಕವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ.
ಇಂದು ಏಕಾಏಕಿ ಬಂದ ಕಿಡಿಗೇಡಿಗಳ ತಂಡ, ಅಂಬೇಡ್ಕರ್ ನಾಮಫಲಕವನ್ನು ಕಿತ್ತು ಹಾಕಿ ಧ್ವಂಸಗೊಳಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಘಟನೆ ಸಂಬಂಧ ಪೊಲೀಸರು ತಕ್ಷಣವೇ ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ವರದಿ: ಮಂಜು ಗುರುಗದಹಳ್ಳಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy