ಚಿತ್ರದುರ್ಗ: ಡಾ.ಬಿ.ಆರ್. ಅಂಬೇಡ್ಕರ್ ನೀಡಿದ ಸಂವಿಧಾನ ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನ ಎಂಬ ಹೆಮ್ಮೆಗೆ ಪಾತ್ರವಾಗಿದೆ. ಈ ಸಂವಿಧಾನದಿಂದಾಗಿ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿದೆ. ಜೊತೆಗೆ ದೇಶ ಒಗ್ಗಟ್ಟಿನಿಂದ ಇರಲು ಸಾಧ್ಯವಾಗಿದೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷರಾದ ಕೆ.ಕುಮಾರ್ ಹೇಳಿದರು.
ಚಿತ್ರದುರ್ಗ ನಗರದಲ್ಲಿ ಜೆ.ಜೆ.ಹಟ್ಟಿ ಬಳಗದ ನೇತೃತ್ವದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತಿ ಆಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ರವರು ತಮ್ಮ ಇಡೀ ಜೀವನವನ್ನು ದೀನದಲಿತರ ರಕ್ಷಣೆಗಾಗಿ ಮುಡಿಪಾಗಿಟ್ಟರು. ಇವರ ಪರಿಶ್ರಮದ ಫಲವಾಗಿ ಇಂದು ದೇಶದ ಜನರಲ್ಲಿ ಸಾಮಾಜಿಕ ಸಮಾನತೆಯ ಅರಿವು ಮೂಡುವಂತಾಗಿದೆ. ಇಂದಿನ ವಿದ್ಯಾರ್ಥಿಗಳು, ನಾಗರಿಕರು ಸಂವಿಧಾನದ ನಿಯಮಗಳನ್ನು ಗೌರವಿಸುವ ಜೊತೆಗೆ ಅವುಗಳನ್ನು ಪಾಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂಬುದಾಗಿ ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷರಾದ ಕೆ.ಕುಮಾರ್ ಮುಖಂಡರಾದ ಗೋಪಾಲಕೃಷ್ಣ, ದುರ್ಗೇಶ್, ಮಹಾನಾಯಕ ಕನ್ನಡ ಪತ್ರಿಕೆಯ ಸಂಪಾದಕರಾದ ಶಿವಕುಮಾರ್, ಮಲ್ಲಿಕಾರ್ಜುನ್, ನೆಲ್ಸನ್ ಮಂಡೇಲಾ, ಅರವಿಂದ, ಸ್ವಾಮಿ, ಪ್ರಸಾದ, ಅನಿಲ ರಂಗಸ್ವಾಮಿ, ಚಂದ್ರು, ಶಶಿಕುಮಾರ್, ಸತೀಶ್, ಇತರರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರಿಗೆ ಅನ್ನಸಂತರ್ಪಣೆ, ಹಾಗೂ ಮಜ್ಜಿಗೆ, ವಿತರಣೆ ಮಾಡಲಾಯಿತು.
ಇದೇ ವೇಳೆ ಭೀಮಯಾತ್ರೆ ಕಾರ್ಯಕ್ರಮ ಏರ್ಪಾಡಿಸಲಾಗಿದ್ದು ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಸಚಿವರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಹೆಚ್. ಆಂಜನೇಯ ಭಾಗವಹಿಸಿ ಮಾತನಾಡಿದರು.
ವರದಿ: ಮುರುಳಿಧರನ್ ಆರ್. ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ )
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5