ತಿಪಟೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 65ನೇ ಮಹಾಪರಿನಿಬ್ಬಾಣ ದಿನದ ಹಿನ್ನೆಲೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ಎನ್.ಮೂರ್ತಿ ಸ್ಥಾಪಿತ) ಇದರ ವತಿಯಿಂದ ತಾಲೂಕಿನ ಮಿನಿ ವಿಧಾನಸೌಧದಲ್ಲಿ ವಿಚಾರ ಸಂಕಿರಣ ನಡೆಸಲಾಯಿತು.
ಈ ಸಂದರ್ಭ ಮಾತನಾಡಿದ ತಾಲೂಕು ಅಧ್ಯಕ್ಷ ಅಶೋಕ್ ಗೌಡನಕಟ್ಟೆ, ಅಸ್ಪೃಶ್ಯತೆ, ಜಾತಿ ವ್ಯವಸ್ಥೆ, ಶೋಷಣೆ ವಿರುದ್ಧ ಹೋರಾಡಿದ ಮಹಾನ್ ವ್ಯಕ್ತಿಗೆ ಎಂದೆಂದಿಗೂ ನಾವೆಲ್ಲರೂ ಚಿರಋಣಿಯಾಗಿರಬೇಕು. ಅವರ ಆದರ್ಶವನ್ನು ನಾವೆಲ್ಲರೂ ಪಾಲಿಸಿಕೊಂಡು ಹೋಗಬೇಕೆಂದು ತಿಳಿಸಿದರು.
ತಾಲೂಕು ಉಪಾಧ್ಯಕ್ಷ ಮತಿಘಟ್ಟ ಶಿವಕುಮಾರ್ ಮಾತನಾಡಿ, ನಮ್ಮೆಲ್ಲರ ಧೀಮಂತ ವ್ಯಕ್ತಿ, ಸಾಮಾನ್ಯ ಬಡ ಕುಟುಂಬದಿಂದ ಬಂದ ಅವರು, ಅಸ್ಪೃಶ್ಯತೆ ಜಾತಿ ಶೋಷಣೆಯನ್ನು ಸಹಿಸಿಕೊಂಡು ಉನ್ನತ ವಿದ್ಯಾಭ್ಯಾಸ ಮಾಡಿ ಇಡೀ ವಿಶ್ವಕ್ಕೆ ಕೊಡುಗೆಯನ್ನು ನೀಡಿದ್ದಾರೆ ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಟ್ಟಸ್ವಾಮಿ ಮಾತನಾಡಿ, ವಿಶ್ವದ ಮಹಾನ್ ವ್ಯಕ್ತಿಯಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಮಾತನಾಡುತ್ತಾ, ಉಡುಪಿಯ ಪೇಜಾವರ ಶ್ರೀಗಳು ಸಂವಿಧಾನ ರಚನೆ ಬಗ್ಗೆ ತುಂಬಾ ಹಗುರವಾಗಿ ಮಾತನಾಡಿದ್ದರು ಅವರನ್ನು ನಮ್ಮ ಸಂಘಟನೆ ಖಂಡಿಸುತ್ತದೆ ಎಂದರು.
ಈ ಸಂದರ್ಭದಲ್ಲಿ. ಕಾರ್ಮಿಕ ಘಟಕದ ಹೊನ್ನಪ್ಪ, ತಾಲೂಕು ಪ್ರಧಾನ ಕಾರ್ಯದರ್ಶಿ ಬೆಣ್ಣೆಹಳ್ಳಿ ರಾಜು, ಯುವ ಘಟಕ ಅಧ್ಯಕ್ಷ ಗುರುಗದಹಳ್ಳಿ ಮಂಜುನಾಥ್ ಚಂದ್ರು ಸೇರಿದಂತೆ ಮುಖಂಡರು ಹಾಜರಿದ್ದರು.
ವರದಿ: ಮಂಜು ಗುರುಗದಹಳ್ಳಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700