ಸರಗೂರು ತಾಲ್ಲೂಕಿನ ಪಟ್ಟಣದ ಸ್ವಾಮಿ ವಿವೇಕಾನಂದ ಆಸ್ಪತ್ರೆಯಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಅಂಬೇಡ್ಕರ್ ರವರ ಭಾವಚಿತ್ರ ವನ್ನು ಇಡದೆ ಆಚರಣೆ ಮಾಡಿರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದವು.
ಸರಗೂರು ತಾಲೂಕಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಂಗ ಸಂಸ್ಥೆಯಾದ ಸ್ವಾಮಿ ವಿವೇಕಾನಂದ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋ ಹಾಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಂಬೇಡ್ಕರ್ ಫೋಟೋ ಬಳಸದಿರುವ ಬಗ್ಗೆ ವಿವೇಕಾನಂದ ಆಸ್ಪತ್ರೆಯ ಅಧಿಕಾರಿಗಳು ವಿಚಾರಿಸಿದಾಗ ಸ್ವಾತಂತ್ರ್ಯ ದಿನದಂದು ನಾವು ಅಂಬೇಡ್ಕರ್ ಪೋಟೋ ಇಡುವುದಿಲ್ಲ. ಜನವರಿ 26ರಂದು ಇಡುತ್ತೀವಿ ಎಂದರಲ್ಲದೇ ನಿಮ್ಮ ಹತ್ತಿರ ಸರ್ಕಾರದ ಸುತ್ತೋಲೆ ಇದ್ದರೆ ಕೊಡಿ ಎಂದು ಉಡಾಫೆಯ ವರ್ತನೆ ತೋರಿದರು ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ವಾತಂತ್ರ್ಯೋತ್ಸವದಲ್ಲಿ ಅಂಬೇಡ್ಕರ್ ಭಾವ ಚಿತ್ರ ಬಳಸದೇ ನಿರ್ಲಕ್ಷ್ಯತನದಿಂದ ಮಾತನಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂವಿಧಾನ ಸಂರಕ್ಷಣಾ ಸಮಿತಿ ಒತ್ತಾಯಿಸಿದೆ. ಈ ವೇಳೆ ಎಸ್ ಎಲ್ ರಾಜಣ್ಣ ಶಿವಣ್ಣ ಕುಮಾರ್ ಗೊವಿಂದರಾಜು ಇನ್ನೂ ಮುಖಂಡರು ಇದ್ದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


