ತುಮಕೂರು: ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದಿಂದ ಶುಕ್ರವಾರ ನಗರದ ವಿದ್ಯಾನಗರದಲ್ಲಿ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜಯಂತಿ ಹಾಗೂ ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರ ಹುಟ್ಟುಹಬ್ಬ ಆಚರಿಸಲಾಯಿತು.
ಇದರ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ತುಮಕೂರು ತಹಶೀಲ್ದಾರ್ ರಾಜೇಶ್ವರಿ ಅವರು ಉದ್ಘಾಟಿಸಿ, ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಲೇಖನ ಸಾಮಗ್ರಿ ವಿತರಿಸಿದರು. ಅಂಬೇಡ್ಕರ್ ಯುವಕರ ಸಂಘದ ಅಧ್ಯಕ್ಷ ಹೆಚ್.ಇ. ನಟರಾಜು ಅಧ್ಯಕ್ಷತೆ ವಹಿಸಿದ್ದರು.
ಇದರ ಪ್ರಯುಕ್ತ ಡಾ. ಅಗರವಾಲ್ ಆಸ್ಪತ್ರೆ ಸಹಕಾರದೊಂದಿಗೆ ಉಚಿತ ನೇತ್ರ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ನೂರಾರು ಜನ ಕಣ್ಣಿನ ತಪಾಸಣೆ ಮಾಡಿಸಿಕೊಂಡರು. ಸ್ಥಳೀಯ ಮುಖಂಡರಾದ ರಂಗಮಣಿ ಕಾಮೇಶ್, ಇನ್ನರ್ ವೀಲ್ ಸಂಸ್ಥೆ ಅಧ್ಯಕ್ಷೆ ಲಲಿತಮ್ಮ, ಕರ್ನಾಟಕ ಸಂಸ್ಕೃತಿ ವೇದಿಕೆ ಅಧ್ಯಕ್ಷೆ ಸುಧಾ, ಮುಖಂಡರಾದ ಆಂಟೋನಿ, ಪ್ರಕಾಶ್, ರವೀಂದ್ರ, ವಿನುತಾ, ಆಯಿಷಾ ಮೊದಲಾದವರು ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


