ತುಮಕೂರು: ಭಾರತ ಸಂವಿಧಾನ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ ನಗರದ ಟೌನ್ ಹಾಲ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆಗೆ ವಿವಿಧ ಇಲಾಖೆ ಅಧಿಕಾರಿಗಳು ಪುಷ್ಪಾರ್ಚನೆ ಮೂಲಕ ಚಾಲನೆ ನೀಡಿದರು.
ಮೆರವಣಿಗೆಯು ಮಹಾನಗರ ಪಾಲಿಕೆಯ ಟೌನ್ ಹಾಲ್ ವೃತ್ತದಿಂದ ಚರ್ಚ್ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ಎಂಪ್ರೆಸ್ ಕಾಲೇಜು ಆವರಣ ತಲುಪಿತು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ತ್ಯಾಗರಾಜು, ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶಬ್ಬೀರ್ ಅಹಮ್ಮದ್ ಸೇರಿದಂತೆ ಶಾಲಾ ಕಾಲೇಜಿನ ವಿದ್ಯಾರ್ಥಿ/ವಿದ್ಯಾರ್ಥಿನಿಯರು, ಸಾರ್ವಜನಿಕರು, ಎಲ್ಲಾ ಸಮುದಾಯದ ದಲಿತ ಮುಖಂಡರುಗಳು ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296