ಕೊರಟಗೆರೆ: ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿನ ಅವ್ಯವಸ್ಥೆ ವಿರುದ್ಧ ಪೋಷಕರು ಪ್ರತಿಭಟನೆ ನಡೆಸಿದ ಘಟನೆ ನಡೆದಿದ್ದು, ಅವ್ಯವಸ್ಥೆಯಿಂದ ಮಕ್ಕಳ ವಿದ್ಯಾಭ್ಯಾಸದ ಮೇಲೆ ವ್ಯತಿರಿಕ್ತವಾದ ಪರಿಣಾಮವಾಗುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.
ದೀಪಾವಳಿ ಪ್ರಯುಕ್ತ ಸರಣಿ ರಜಾ ಇರುವ ಕಾರಣ ತಮ್ಮ ಮನೆಗಳಿಗೆ ತೆರೆಳಿದ್ದ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಪಟ್ಟಣದ ಡಾ, ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ನಡೆಯುತ್ತಿದ್ದ ಅವ್ಯವಸ್ಥೆ ಬಗ್ಗೆ ತಂದೆ ತಾಯಿಗಳಿಗೆ ತಿಳಿಸಿದ ಪರಿಣಾಮ ವಿವಿಧ ತಾಲ್ಲೂಕುಗಳಿಂದ ಪೋಷಕರು ಮಕ್ಕಳೊಂದಿಗೆ ಆಗಮಿಸಿ ವಸತಿ ಶಾಲೆ ಪ್ರಾಂಶುಪಾಲರ ವಿರುದ್ದ ಪ್ರತಿಭಟನೆ ನಡೆಸಿ ವಾಗ್ವಾದಕ್ಕೆ ಇಳಿದಿದ್ದಾರೆ.
ಶಾಲೆಯಲ್ಲಿನ ಅವ್ಯವಸ್ಥೆ, ಅಭದ್ರತೆ, ಹುಳು ಬಿದ್ದಿರುವ ಊಟ, ಪ್ರಾಂಶುಪಾಲರು ಭೋದಕವರ್ಗದ ಕಿತ್ತಾಟ ಸೇರಿದಂತೆ ಹಲವು ಸಾಲು ಸಾಲು ದೂರುಗಳ ಕೇಳಿ ಬಂದಿವೆ. ವಿದ್ಯಾರ್ಥಿ ನಿಲಯದ ತಾತ್ಕಾಲಿಕ ಭದ್ರತಾ ಸಿಬ್ಬಂದಿ ಲೋಕೇಶ್ ಅನಗತ್ಯವಾಗಿ ಹೆಣ್ಣು ಮಕ್ಕಳ ಕೊಠಡಿಗೆ ಬಾಗಿಲು ತಟ್ಟಿ ಮುನ್ಸೂಚನೆ ನೀಡದೇ ವಿನಾಕಾರಣ ಬಂದು ತೊಂದರೆ ನೀಡುತ್ತಿರುವುದನ್ನು ಹೆಣ್ಣುಮಕ್ಕಳು ಒಕ್ಕೊರಳಿನಲ್ಲಿ ಖಂಡಿಸಿದರು.
ಇಷ್ಟೆಲ್ಲ ಸಮಸ್ಯೆಗಳಿದ್ದರೂ ಪ್ರಾಂಶುಪಾಲರ ಬಳಿ ದೂರು ನೀಡಿದರೂ ಅವರು ಸೂಕ್ತ ಕ್ರಮಕೈಗೊಳ್ಳದೇ ಸಹ ತಿಪ್ಪೆ ಸಾರಿಸುವ ಕೆಲಸವನ್ನು ಮಾಡುತ್ತಿದ್ದು, ಹೀಗಾಗಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪೋಷಕರ ಬಳಿ ಈ ವಿಚಾರ ತಿಳಿಸಿದ್ದಾರೆ. ಗಂಡು ಮಕ್ಕಳಿಗೂ ಸಹ ಅನಾರೋಗ್ಯದ ಸಮಸ್ಯೆ ಇದ್ದಾಗ ಸರಿಯಾದ ಚಿಕಿತ್ಸೆ ನೀಡಿಲ್ಲದ ಬಗ್ಗೆ ದೂರುಗಳು ಕೇಳಿ ಬಂದಿವೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700