ಕೊರಟಗೆರೆ : ತುಮಕೂರಿನ ಹೊಳವನಹಳ್ಳಿ ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಬಾಬು ಜಗಜೀವನ್ ರಾಂ ಹಾಗೂ ಡಾ.ಬಿ.ಅರ್. ಅಂಬೇಡ್ಕರ್ ಅವರ 137ನೇ ಜಯಂತಿಯನ್ನು ಆಚರಿಸಲಾಗಿತ್ತು.
ಈ ದೇಶದಲ್ಲಿ ಅಸ್ಪೃಶ್ಯತೆ ಮತ್ತು ಅಸಮಾನತೆಯ ಆಂದೋಲನ ಪ್ರಾರಂಭಿಸಿ ಶೋಷಿತ ವರ್ಗಕ್ಕೆ ನ್ಯಾಯ ಒದಗಿಸಲು ಮಹಾನ್ ಹೋರಾಟ ನಡೆಸಿದ ದೇಶದ ಮಹಾನಾಯಕ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಎಂದು ವಕೀಲ ನರಸಿಂಹರಾಜು ತಿಳಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಒಂದು ಜಾತಿಗೆ ಸಿಮೀತರಲ್ಲ, ಈ ದೇಶದ ಪ್ರತಿಯೊಂದು ಜಾತಿ ಜನಾಂಗದವರು ನೆಮ್ಮದಿಯಿಂದ ಜೀವನ ನಡೆಸಬೇಕು ಎನ್ನವ ಉದ್ದೇಶದಿಂದ ಈ ದೇಶಕ್ಕೆ ಬಹು ದೊಡ್ಡ ಗ್ರಂಥವಾಗಿರುವ ಸಂವಿಧಾನ ನೀಡಿದ್ದಾರೆ. ಇಂತಹ ಮಹಾನ್ ವ್ಯಕ್ತಿಯನ್ನ ಪ್ರತಿಯೊಬ್ಬರು ಗೌರವಿಸಬೇಕು. ಅವರ ಆದರ್ಶವನ್ನ ಪಾಲಿಸಿದಾಗ ಮಾತ್ರ ಅವರ ಜಯಂತಿ ಆಚರಣೆ ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮುಖಂಡ ಜಯರಾಮ್ ಮಾತನಾಡಿ ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ವಿಚಾರ, ಅಭಿವ್ಯಕ್ತಿ ನಂಬಿಕೆ ಶ್ರದ್ದೆ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನ ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನ ದೊರೆಯುವಂತೆ ಮಾಡಿದ ಮಹಾನ್ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನ ಪ್ರತಿಯೊಬ್ಬರು ನೆನಪಿನಲ್ಲಿ ಇಟ್ಟಕೊಳ್ಳಬೇಕಿದೆ. ನಾವು ಪ್ರತಿವರ್ಷ ನಮ್ಮ ಬಡಾವಣೆಯಲ್ಲಿ ಅಂಬೇಡ್ಕರ್ ಜಯಂತಿಯನ್ನ ಆಚರಣೆ ಮಾಡಿಕೊಂಡು ಬರುತ್ತಿದ್ದೇವೆ ಎಂದು ಅವರು ತಿಳಿಸಿದರು.
ವರದಿ : ಮಂಜುಸ್ವಾಮಿ ಎಂ ಎನ್ ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


