ಸರಗೂರು: ಡಾ.ಬಿ.ಆರ್ ಅಂಬೇಡ್ಕರ್ ಅವರ ಚಿಂತನೆಗಳಿಂದ ನಮಗೆಲ್ಲರಿಗೂ ಕೂಡ ಸ್ಫೂರ್ತಿಯ ಸೆಲೆ, ಆದರ್ಶ ವ್ಯಕ್ತಿ. ಅಸಮಾನತೆ ವಿರುದ್ಧ ಗಟ್ಟಿ ಧ್ವನಿಯೆತ್ತಿದ ಮಾನವತಾವಾದಿ. ನ್ಯಾಯ ಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾರಕರಾಗಿ ಈ ಸಮಾಜಕ್ಕೆ ನೀಡಿದ ಕೊಡುಗಗಳು ಅಗಾಧವಾದದ್ದು ಎಂದು ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎಸ್.ಎನ್. ನಾಗರಾಜು ತಿಳಿಸಿದರು.
ತಾಲೂಕಿನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅದಿಕರ್ನಾಟಕ ಮಹಾಸಭಾ ಹಾಗೂ ತಾಲೂಕು ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ಶುಕ್ರವಾರದಂದು ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 68 ನೇ ಮಹಾ ಪರಿನಿರ್ವಾಣ ದಿನಾಚರಣೆ ಪೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಡಿಸೆಂಬರ್ 6 ಸಂವಿಧಾನಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 68ನೇ ಪುಣ್ಯ ತಿಥಿ ದಿನವನ್ನು ‘ಮಹಾಪರಿನಿರ್ವಾಣ ದಿನ’ವನ್ನಾಗಿ ಆಚರಿಸಲಾಗುತ್ತಿದ್ದು, ಭಾರತ ಕಂಡ ಮಹಾನ್ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್. ಯುವ ಸಮುದಾಯಕ್ಕೆ ತನ್ನ ಚಿಂತನೆಗಳಿಂದಲೇ ಸ್ಫೂರ್ತಿ ಹಾಗೂ ಆದರ್ಶ ವ್ಯಕ್ತಿಯೆನಿಸಿಕೊಂಡಿದ್ದಾರೆ. ಸಮಾಜ ಸುಧಾರಕರಾಗಿದ್ದು, ದಲಿತ ಬೌದ್ಧ ಚಳುವಳಿಯನ್ನು ಮುನ್ನಡೆಸುವ ಮೂಲಕ ಪ್ರೇರಣೆಯಾದ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು.
ಅದಲ್ಲದೇ, ಭೀಮರಾವ್ ರಾಮ್ ಜಿ ಅಂಬೇಡ್ಕರ್ ಅವರು ದಲಿತ ಕುಟುಂಬದಲ್ಲಿ ಜನಿಸಿದ್ದರಿಂದ ಅಸ್ಪೃಶ್ಯತೆ ನೋವು ಮಾತ್ರ ಇವರನ್ನು ಬಿಡಲಿಲ್ಲ. ಹೀಗಾಗಿ ಅಂಬೇಡ್ಕರ್ ಅವರು ಮಹಿಳೆಯರು ಹಕ್ಕುಗಳು, ಶೋಷಿತ ವರ್ಗಗಳ ಹಕ್ಕಿಗಾಗಿ ಹೋರಾಡಿದ ಮಹಾನ್ ವ್ಯಕ್ತಿ. ಡಿಸೆಂಬರ್ 6 ರಂದು ಅಂಬೇಡ್ಕರ್ ಅವರ ಪುಣ್ಯ ತಿಥಿಯಾಗಿದ್ದು, ಈ ದಿನವನ್ನು ಮಹಾಪರಿನಿರ್ವಾಣ ದಿನ’ವನ್ನಾಗಿ ಆಚರಿಸಲಾಗುತ್ತದೆ ಎಂದರು.
ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ ಮಾತನಾಡಿ, ಬಿ.ಆರ್.ಅಂಬೇಡ್ಕರ್ ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ́ಬುದ್ಧ ಮತ್ತು ಅವರ ಧಮ್ಮ’ ಗ್ರಂಥವನ್ನು ಪೂರ್ಣಗೊಳಿಸಿದ ಕೆಲವೇ ಕೆಲವು ದಿನಗಳಲ್ಲಿ ದೆಹಲಿಯಲ್ಲಿ ತಮ್ಮ ನಿವಾಸದಲ್ಲಿ ಡಿಸೆಂಬರ್ 6, 1956 ರಲ್ಲಿ ಮರಣ ಹೊಂದಿದರು. ಆದರೆ, ಅಂಬೇಡ್ಕರ್ ಅವರ ಪಾರ್ಥೀವ ಶರೀರವನ್ನು ಮುಂಬೈನ ದಾದರ್ ಚೌಪಾಟಿಯಲ್ಲಿ ಬೌದ್ಧ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಯಿತು.
ಅಂಬೇಡ್ಕರ್ ಟ್ರಸ್ಟ್ ಅಧ್ಯಕ್ಷ ಚನ್ನೀಪುರ ನಾಗರಾಜು ಮಾತನಾಡಿ, ಅನುಯಾಯಿಗಳು, ಅಂಬೇಡ್ಕರ್ ಅವರನ್ನು ಭಗವಾನ್ ಬುದ್ಧನಂತೆಯೇ ಪ್ರಭಾವಶಾಲಿಯಾದ ವ್ಯಕ್ತಿ. ಶುದ್ಧ ಮನಸ್ಸಿನ ಹಾಗೂ ದೇವರಿಂದ ಆಶೀರ್ವಾದ ಹೊಂದಿದವರು. ಸಮಾಜದಲ್ಲಿನ ಅವರ ಮಹಾನ್ ಕಾರ್ಯಗಳಿಂದಾಗಿ ಅವರಿಗೆ ಯಾವುದೇ ಕರ್ಮದ ಋಣ ಉಳಿದಿಲ್ಲ ಎಂದು ನಂಬಿದ್ದ ಕಾರಣ ಅಂಬೇಡ್ಕರ್ ಅವರ ಪುಣ್ಯತಿಥಿಯನ್ನು ಮಹಾಪರಿನಿರ್ವಾಣ ದಿನ ಅಥವಾ ದಿವಸ್ ಎಂದು ಕರೆದರು. ಅಂದಿನಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುಣ್ಯ ತಿಥಿಯನ್ನು ಮಹಾಪರಿನಿರ್ವಾಣ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ದಿನದಂದು ದೇಶದಾದಂತ್ಯ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಭಾರತೀಯ ಸಂವಿಧಾನ ಪಿತಾಮಹ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಆದಿಕರ್ನಾಟಕ ಮಹಾಸಭಾ ಪ್ರಧಾನ ಕಾರ್ಯದರ್ಶಿ ಚನ್ನೀಪುರ ಮಲ್ಲೇಶ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೆಂಡಗಣ್ಣಸ್ವಾಮಿ, ಕಸಾಪ ಪ್ರದಾನ ಕಾರ್ಯದರ್ಶಿ ಗ್ರಾಮೀಣ ಮಹೇಶ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಚಿಕ್ಕವೀರನಾಯಕ, ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ್, ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಗೋಪಾಲಸ್ವಾಮಿ, ದೊಡ್ಡಯ್ಯ, ಅಂಬೇಡ್ಕರ್ ಟ್ರಸ್ಟ್ ಗೌರವಾಧ್ಯಕ್ಷ ಮನುಗನಹಳ್ಳಿ ತಿಮ್ಮಯ್ಯ, ಬಿಲ್ಲಯ್ಯ,ಸಿದ್ದರಾಜು, ಇನ್ನೂ ಮುಖಂಡರು ಸೇರಿದಂತೆ ಭಾಗಿಯಾಗಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx