ರಾಯಚೂರು: ಚಲಿಸುತ್ತಿದ್ದ ಆ್ಯಂಬುಲೆನ್ಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಆ್ಯಂಬುಲೆನ್ಸ್ ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ರಾಯಚೂರಿನ ಆಶಾಪುರ ರಸ್ತೆಯಲ್ಲಿ ನಡೆದಿದೆ.
ಆ್ಯಂಬುಲೆನ್ಸ್ ನ ಇಂಜಿನ್ ನಲ್ಲಿ ಸಮಸ್ಯೆ ಕಂಡು ಬಂದಿದ್ದು, ಪರಿಣಾಮವಾಗಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಆ್ಯಂಬುಲೆನ್ಸ್ ನಲ್ಲಿದ್ದ ಮೂವರು ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಯಚೂರಿನಿಂದ ಉಡಮಗಲ್ ಗ್ರಾಮಕ್ಕೆ ಆ್ಯಂಬುಲೆನ್ಸ್ ಹೊರಟಿತ್ತು. ಬೆಂಕಿ ಹತ್ತಿಕೊಂಡ ಬೆನ್ನಲ್ಲೇ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದೆ.
ನಂತರ ಮೃತದೇಹವನ್ನು ಬೇರೊಂದು ವಾಹನದಲ್ಲಿ ಗ್ರಾಮಕ್ಕೆ ಕುಟುಂಬಸ್ಥರು ಸಾಗಿಸಿದ್ದಾರೆ. ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4