ಕಾಸರಗೋಡು: ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಕುಂಜತ್ತೂರು ಬಳಿ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೃತರನ್ನು ಶ್ರೀನಾಥ, ಶರತ್ ಮೆನನ್ ಎಂದು ಗುರುತಿಸಲಾಗಿದೆ.
ಮೃತರು ಕೇರಳದ ತ್ರಿಶೂರು ಜಿಲ್ಲೆ ಗುರುವಾಯೂರು ನಿವಾಸಿಗಳು ಎಂದು ತಿಳಿದುಬಂದಿದೆ. ಕಾಸರಗೋಡಿನಿಂದ ಮಂಗಳೂರಿಗೆ ಆ್ಯಂಬುಲೆನ್ಸ್ನಲ್ಲಿ ರೋಗಿ ಕರೆದೊಯ್ಯಲಾಗುತ್ತಿತ್ತು. ಮಂಗಳೂರು ಕಡೆಯಿಂದ ಮಂಜೇಶ್ವರದತ್ತ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296