ಬೆಂಗಳೂರು: ಆಂಬುಲೆನ್ಸ್ ನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ಮಾಡಿ ಪುಂಡಾಟ ನಡೆಸಿದ ಘಟನೆ ಬೆಂಗಳೂರಿನ ನೆಲಮಂಗಲ ಟೋಲ್ ಬಳಿ ನಡೆದಿದೆ. ಆಂಬ್ಯೂಲೆನ್ಸ್ ಚಾಲಕ ಜಾನ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ.
ತುಮಕೂರಿನ ಖಾಸಗಿ ಆಸ್ಪತ್ರೆಯಿಂದ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ರೋಗಿಯೊಬ್ಬರನ್ನು ತುರ್ತು ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಆಂಬ್ಯೂಲೆನ್ಸ್ ನ್ನು ಕುಡಿದ ನಶೆಯಲ್ಲಿದ್ದ ನಾಲ್ವರು ಕಾರಿನಲ್ಲಿ ಚೇಸ್ ಮಾಡಿ ಅಡ್ಡಗಟ್ಟಿ ಚಾಲಕನನ್ನು ಥಳಿಸಿದ್ದಾರೆ.
ಐದು ತಿಂಗಳ ಮಗುವಿಗೆ ತುರ್ತು ಚಿಕಿತ್ಸೆಗೆ ಆಕ್ಸಿಜನ್ ಮೂಲಕ ಕರೆ ತರಲಾಗುತ್ತಿತ್ತು. ಮಗುವಿನ ಕಂಡಿಷನ್ ಕ್ರಿಟಿಕಲ್ ಇದೆ ಬಿಟ್ಬಿಡಿ ಎಂದು ಮಗುವಿನ ಪೋಷಕರು ಕೈ ಮುಗಿದರೂ ಯುವಕರು ಬಿಡದೇ ಪುಂಡಾಟ ಮೆರೆದಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


