ಬೆಂಗಳೂರು: ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಏ.26ರ ರಾತ್ರಿ 10:30ರ ಸುಮಾರಿಗೆ ನಡೆದಿದೆ.
ಘಟನೆಯಲ್ಲಿ ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ.
ಮಾರ್ಕೆಟ್ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ಆಂಬ್ಯುಲೆನ್ಸ್ ಚಾಲಕ ಸಮಂತ್ ವೇಗವಾಗಿ ಆ್ಯಂಬುಲೆನ್ಸ್ ಚಲಾಯಿಸಿಕೊಂಡು ಬರುತ್ತಿದ್ದರು. ಈ ಸಂದರ್ಭದಲ್ಲಿ ನಿಯಂತ್ರಣ ಕಳೆದುಕೊಂಡ ಆ್ಯಂಬುಲೆನ್ಸ್ ಇತರ ವಾಹನಗಳಿಗೆ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ.
ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆ ಸಂಬಂಧ ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


