ಮಧುಗಿರಿ: ಪಟ್ಟಣದ ಎಂ.ಎನ್.ಕೆ. ಸಮುದಾಯ ಭವನದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹೆಚ್. ಕೆಂಚಮಾರಯ್ಯ ಮತ್ತು ತುಮುಲ್ ಮಾಜಿ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್ ಸುದ್ದಿಗೋಷ್ಠಿ ನಡೆಸಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಆರ್.ರಾಜೇಂದ್ರ ರವರ ಪರವಾಗಿ ಮತಯಾಚಿಸಿದರು.
ಕೆಂಚ ಮಾರಯ್ಯ ಮಾತನಾಡಿ, ಪ್ರಸ್ತುತ ಆಡಳಿತ ನಡೆಸುತ್ತಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ವಿಚಾರವಾಗಿ ಸಂಪೂರ್ಣವಾಗಿ ವಿಫಲವಾಗಿದ್ದು, ಎಸ್ .ಇ .ಪಿ ಮತ್ತು ಟಿ.ಎಸ್ .ಪಿ. ಯೋಜನೆ ಅಡಿಯಲ್ಲಿ ಕಾಂಗ್ರೆಸ್ ಸರ್ಕಾರ 88 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದರು, ಆದರೆ ಬಿಜೆಪಿ ಸರ್ಕಾರ 28 ಸಾವಿರ ರೂಪಾಯಿ ಮೀಸಲಿಟ್ಟು ಬಿಜೆಪಿ ದಲಿತರ ಪರ ಇಲ್ಲ ಎಂದು ತೋರಿಸಿದೆ. ಅಲ್ಲದೇ ಶಿಕ್ಷಣ ಕ್ಷೇತ್ರದಲ್ಲಿಯೂ ಸಹ ಅನ್ಯಾಯ ಮಾಡಿದೆ ಹಾಗೂ ಬಿಟ್ ಕಾಯಿನ್ ಹಗರಣನವು ಸರ್ಕಾರದ ವೈಫಲ್ಯತೆಯನ್ನು ಎತ್ತಿ ತೋರಿಸುತ್ತಿದೆ. ರಾಜ್ಯ ಗುತ್ತಿಗೆದಾರರ ಸಂಘದ ವತಿಯಿಂದ ರಾಜ್ಯ ಸರ್ಕಾರ ವಿರುದ್ಧ ಶೇಖರ 40% ಪರ್ಸೆಂಟ್ ಕಮಿಷನ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರದ ಮೂಲಕ ದೂರು ಸಲ್ಲಿಸಿರುವುದು ಬಿ.ಜೆ.ಪಿ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸಿದೆ ಎಂದು ಆರೋಪಿಸಿದರು.
ತುಮುಲ್ ಮಾಜಿ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್ ಮಾತನಾಡಿ, ಜಿಲ್ಲೆಯ ಎಲ್ಲಾ ಮುಖಂಡರು ಒಮ್ಮತದಿಂದ ಆರ್.ರಾಜೇಂದ್ರ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ. ನಾವೆಲ್ಲರೂ ಒಗ್ಗಟ್ಟಾಗಿ ಅವರ ಗೆಲುವಿಗಾಗಿ ಶ್ರವಿಸಬೇಕು. ಈ ಮೂಲಕ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಬೇಕು. ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ಯಾವ ಅಭ್ಯರ್ಥಿಯನ್ನು ಆಯ್ಕೆಮಾಡಿದರೆ, ತಮ್ಮ ಕ್ಷೇತ್ರಗಳ ಅಭಿವೃದ್ಧಿ ಹೊಂದುತ್ತದೆ ಎನ್ನುವುದನ್ನು ಅರಿತುಮತ ಚಲಾಯಿಸಬೇಕು ಎಂದು ತಿಳಿಸಿದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ.ಜೆ.ರಾಜಣ್ಣ.ರಾಜ್ಯ ಸಹಕಾರ ಮಹಾಮಂಡಳದ ಮಾಜಿ ಅಧ್ಯಕ್ಷ ಎನ್ ಗಂಗಣ್ಣ, ಪುರಸಭೆಯ ಅಧ್ಯಕ್ಷ ತಿಮ್ಮರಾಜು ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡಯ್ಯ, ಕೆ.ಪ್ರಕಾಶ್, ಸದಸ್ಯರಾದ ಲಾಲಾ ಪೇಟೆ ಮಂಜುನಾಥ್, ಅಲೀಂ, ಮಂಜುನಾಥ್, ನಟರಾಜು, ಮಾಜಿ ಪುರಸಭೆ ಸದಸ್ಯ ಸಾದಿಕ್, ಉಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಸ್.ಆರ್.ರಾಜ್ ಗೋಪಾಲ್, ಮುಖಂಡರಾದ ಬಾಬಾ ಫಕ್ರುದ್ದಿನ್, ಭಾಸ್ಕರ್ ಉಪಸ್ಥಿತರಿದ್ದರು.
ವರದಿ: ಅಬಿದ್, ಮಧುಗಿರಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700