ಅಮೆರಿಕ(America)ದ ಟೆಕ್ಸಾಸ್ನಲ್ಲಿ ಗುಂಡಿನ ದಾಳಿ ನಡೆದಿದ್ದು 8 ವರ್ಷದ ಬಾಲಕ ಸೇರಿ ಐವರು ಸಾವನ್ನಪ್ಪಿದ್ದಾರೆ. ಟೆಕ್ಸಾಸ್‌ನ ಕ್ಲೀವ್‌ಲ್ಯಾಂಡ್‌ನಲ್ಲಿ ಈ ಘಟನೆ ನಡೆದಿದೆ, ಆತ ರಾತ್ರಿಹೊತ್ತು ಮನಬಂದಂತೆ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ, ನೆರೆಯ ಮನೆಯವರು ಈ ಶಬ್ದದಿಂದ ಮನೆಯಲ್ಲಿ ಮಕ್ಕಳು ಮಲಗಲು ಕಷ್ಟವಾಗುತ್ತಿದೆ ನಿಲ್ಲಿಸಿ ಎಂದು ಕೇಳಿಕೊಂಡಿದ್ದಕ್ಕೆ, ಬಾಲಕ ಸೇರಿ ಮನೆಯ ಐವರನ್ನು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ವೇಳೆ ಬಂದೂಕುಧಾರಿ ಪಾನಮತ್ತನಾಗಿದ್ದ ಎಂದು ಹೇಳಿದ್ದಾರೆ. ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಶಂಕಿತ ತನ್ನ ರೈಫಲ್ ಹಿಡಿದುಕೊಂಡು ಬರುತ್ತಿರುವುದು ಸೆರೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮನೆಯಲ್ಲಿ 10 ಜನರಿದ್ದರು, ಮೃತರಲ್ಲಿ ಮೂವರು ಮಹಿಳೆಯರು ಹಾಗೂ ಓರ್ವ ಪುರುಷ ಸೇರಿದ್ದಾರೆ. ಮೃತರು 8 ರಿಂದ 40 ರ ವಯಸ್ಸಿನವರು ಎಂದು ಗುರುತಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


