ಸರಗೂರು: ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ತಾಲ್ಲೂಕು ಅಧ್ಯಕ್ಷರಾಗಿ ಅಮೀರ್ ಸುಹೇಲ್ ರವರು ನೇಮಕಗೊಂಡಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರಾದ ಅಬ್ದುಲ್ ಜಬ್ಬಾರ್ ರವರ ಸೂಚನೆ ಮೇರೆಗೆ ಹಾಗೂ ಶಾಸಕ ಅನಿಲ್ ಚಿಕ್ಕಮಾದುರವರ ಶಿಫಾರಸಿನ ಮೇರೆಗೆ ಅಮೀರ್ ಸುಹೇಲ್ ರವರನ್ನು, ಎಚ್ ಡಿ ಕೋಟೆ ವಿಧಾನಸಭಾ ಕ್ಷೇತ್ರದ ಸರಗೂರು ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು.
ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ಜಿಲ್ಲಾ ಅಧ್ಯಕ್ಷರಾದ ಮೋಸಿನ್ ಖಾನ್ ರವರು ಆದೇಶ ಹೊರಡಿಸಿ. ನಂತರ ಬ್ಲಾಕ್ ಕಾಂಗ್ರೆಸ್ ಪಕ್ಷದ ತಾಲೂಕು ಅಧ್ಯಕ್ಷರು ಏಜಾಷಾ ಪಾಷಾ ಮತ್ತು ಮನುಗನಹಳ್ಳಿ ಮಾದಪ್ಪ ಆದೇಶ ಪತ್ರವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಚಾಮರಾಜು, ಚೆಲುವರಾಜು, ಟೌನ್ ಅಧ್ಯಕ್ಷ ನಾಗರಾಜು,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಪಿ ರವಿ, ಚಿಕ್ಕವೀರನಾಯಕ, ಭಾಗ್ಯಲಕ್ಷ್ಮಿ, ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು, ಕಾಂಗ್ರೆಸ್ ಪಕ್ಷದ ವಿಧ್ಯಾರ್ಥಿ ಸಂಘದ ಅಧ್ಯಕ್ಷ ಮಹಮದ್ ಶೋಯಬ್ , ಮಹೇಶ್, ವೇಷ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


