ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಎನ್. ಚಂದ್ರಬಾಬು ನಾಯ್ಡು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲೇ ತಮಿಳಿಸೈ ವಿರುದ್ಧ ಅಮಿತ್ ಶಾ ಅಸಮಾಧಾನ ವ್ಯಕ್ತಪಡಿಸಿರುವ ಘಟನೆಯ ದೃಶ್ಯಾವಳಿಯು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅನುಷಾ ರವಿ ಸೂದ್ ಎಂಬ ಬಳಕೆದಾರರೊಬ್ಬರು, ಅಮಿತ್ ಶಾ ಹಾಗೂ ತಮಿಳಿಸೈ ನಡುವೆ ಮಾತಿನ ಚಕಮಕಿ ನಡೆಯಲು ತಮಿಳುನಾಡಿನಲ್ಲಿ ಬಿಜೆಪಿಗೆ ಆಗಿರುವ ಹಿನ್ನಡೆ ಕಾರಣ. ಫಲಿತಾಂಶದ ನಂತರ, ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ ಎಂದು ಬರೆದುಕೊಂಡಿದ್ದಾರೆ.
ಅವರ ಈ ವ್ಯಾಖ್ಯಾನವು ಹಲವರ ಗಮನ ಸೆಳೆದಿದೆ. ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಒಂದೂ ಸ್ಥಾನ ಗಳಿಸದ ಬಿಜೆಪಿ ಹೀನಾಯ ಸೋಲು ಅನುಭವಿಸಿತ್ತು. ತಮಿಳುನಾಡಿನಲ್ಲಿರುವ ಎಲ್ಲ 39 ಸ್ಥಾನಗಳನ್ನು ಆಡಳಿತಾರೂಢ ಡಿಎಂಕೆ ನೇತೃತ್ವದ ಇಂಡಿಯಾ ಮೈತ್ರಿಕೂಟ ಬಾಚಿಕೊಂಡಿತ್ತು. ಇದರ ಬೆನ್ನಿಗೇ ಬಿಜೆಪಿಯ ರಾಜ್ಯಾಧ್ಯಕ್ಷರಾದ ಕೆ.ಅಣ್ಣಾಮಲೈ ವಿರುದ್ಧ ಪಕ್ಷದೊಳಗೆ ಭಿನ್ನಮತ ಸ್ಫೋಟಗೊಂಡಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296