ಪ್ರಯಾಗ್ ರಾಜ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹಾ ಕುಂಭಮೇಳದಲ್ಲಿ ಸಾಧುಗಳ ಜೊತೆಗೆ ಪವಿತ್ರ ಸ್ನಾನ ಮಾಡಿದರು.
ತ್ರಿವೇಣಿ ಸಂಗಮದಲ್ಲಿಪವಿತ್ರ ಸ್ನಾನ ಮಾಡಿದ ನಂತರ ಶಾ ಬಡೇ ಹನುಮಾನ್ ಜಿ ದೇವಸ್ಥಾನ ಮತ್ತು ಅಭಯವತ್ ಗೆ ಭೇಟಿ ನೀಡಿದರು. ನಂತರ ಜುನಾ ಅಖಾರಕ್ಕೆ ತೆರಳಿ ಮಹಾರಾಜರು ಮತ್ತು ಅಖಾರದ ಇತರ ಸಂತರನ್ನು ಭೇಟಿ ಮಾಡಿ ಅವರೊಂದಿಗೆ ಭೋಜನ ಸೇವಿಸಿದರು.
ಮಹಾ ಕುಂಭಮೇಳದಲ್ಲಿ ಹಲವಾರು ಗಣ್ಯರು ಪವಿತ್ರಾ ಸ್ನಾನ ಮಾಡಲಿದ್ದಾರೆ. ಫೆಬ್ರವರಿ 5 ರಂದು ಪ್ರಧಾನಿ ನರೇಂದ್ರ ಮೋದಿ ಪವಿತ್ರ ಸ್ನಾನ ಮಾಡಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx