ಸರಗೂರು: ದೇವರ ಹೆಸರು ಹೇಳಿದರೆ ಮುಕ್ತಿ ಸಿಗುತ್ತದೆ. ಅಂಬೇಡ್ಕರ್ ಹೆಸರು ಹೇಳಿದರೆ ಮುಕ್ತಿ ಸಿಗಲ್ಲ ಎಂದರೆ, ಇದು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಮಾಡಿದ ಅವಮಾನ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ಹಾಗೂ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ಕಿಡಿಕಾರಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರದಂದು ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳು ಮುಖಂಡರು ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಪ್ರತಿಭಟನೆಯಲ್ಲಿ ಮಾತನಾಡಿದರು.
ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಕೊಡದೇ ಇದ್ದಿದ್ದರೆ ಅಮಿತ್ ಶಾ ಗೃಹ ಮಂತ್ರಿಯೂ ಆಗುತ್ತಿರಲಿಲ್ಲ. ಆದರೆ ಇಂದು ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಆಗ್ರಹಿಸಿದರು.
ಗೃಹ ಸಚಿವ ಅಮಿತ್ ಶಾ ಎದುರಾಳಿ ಪಕ್ಷವನ್ನು ಎದುರಿಸುವ ಸಲುವಾಗಿ ಅಂಬೇಡ್ಕರ್ ಅವರನ್ನು ಬಳಸಿಕೊಂಡಿದ್ದಾರೆ. ಮತ್ತೊಂದು ಪಕ್ಷವನ್ನು ಮಣಿಸಲು ಬಾಬಾ ಸಾಹೇಬರನ್ನು ಬಳಸಿಕೊಂಡರೆ ಸಹಿಸಲು ಅದನ್ನು ಸಾಧ್ಯವಿಲ್ಲ .ವಿವಾದ ಕಿಡಿ ಅಕ್ಷಮ್ಯ ಅಪರಾಧ. ಈ ಮೊಂಡುತನದ ಹೇಳಿಕೆಯನ್ನು ಪಕ್ಷಾತೀತವಾಗಿ ಖಂಡಿಸಬೇಕು. ಎಲ್ಲ ಸಮುದಾಯಗಳ ಜತೆಗೂಡಿ ಪ್ರತಿಭಟನೆ ಮಾಡಲಾಗುವುದು ಎಂದರು.
ಎಪಿಎಂಸಿ ಮಾಜಿ ಅಧ್ಯಕ್ಷ ದೇವಲಾಪುರ ಸಿದ್ಧರಾಜು ಮಾತನಾಡಿ, ಸಂವಿಧಾನ ಶಿಲ್ಪಿ ವಿಶ್ವಜ್ಞಾನಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಬಗ್ಗೆ ಅವಹೇಳನವಾಗಿ ಮಾತನಾಡಿರುವ ಕೇಂದ್ರದ ಗೃಹ ಸಚಿವ ಅಮಿತ್ ಶಾ ಸರಿಯಿಲ್ಲ. ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ನೀಡಿದ ಹೇಳಿಕೆ ಖಂಡನೀಯ. ಇಡೀ ವಿಶ್ವ ಅಂಬೇಡ್ಕರ್ ಬಗ್ಗೆ ಪ್ರಶಂಸೆಯಿಂದ ಮಾತನಾಡುತ್ತದೆ. ಪ್ರಜಾಪ್ರಭುತ್ವಕ್ಕೆ ಸಂವಿಧಾನ ಕೊಡುವ ಮೂಲಕ ದೇಶವನ್ನು ಒಗ್ಗೂಡಿಸಿದವರು ಅಂಬೇಡ್ಕರ್. ಅವರ ಬಗ್ಗೆ ಲಘುವಾಗಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕ್ಷಮೆ ಕೇಳಬೇಕು. ಹಾಗೂ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು. ಪ್ರಧಾನ ಮಂತ್ರಿ ನರೇಂದ್ರ ಮೋದಿರವರಿಗೆ ಅಂಬೇಡ್ಕರ್ ಬಗ್ಗೆ ಗೌರವ ಇದ್ದಾರೆ ಸಚಿವ ಸಂಪುಟದಿಂದ ಶಾ ಅವರನ್ನು ವಜಾಗೊಳಿಸಿ ಎಂದು ವಾಗ್ದಾಳಿ ನಡೆಸಿದರು.
ಪ.ಪಂ. ಸದಸ್ಯ ಶ್ರೀನಿವಾಸ ಮಾತನಾಡಿ, ಅಮಿತ್ ಶಾ ಅವರು ಅಂಬೇಡ್ಕರ್ ಅವರ ಬಗ್ಗೆ ಇನ್ನೂ ಹೆಚ್ಚು ತಿಳಿದುಕೊಳ್ಳಬೇಕು ಎಂದರು.
ಅಂಬೇಡ್ಕರ್ ಟ್ರಸ್ಟ್ ನಾಗರಾಜು ಮಾತನಾಡಿ, ಅಂಬೇಡ್ಕರ್ ಅವರ ವ್ಯಕ್ತಿತ್ವದ ಬಗ್ಗೆ ಮಾತಾಡಿದ್ದು, ನಮಗೆ ನೋವಾಗಿದೆ. ಹೀಗೆ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ. ಅಂಬೇಡ್ಕರ್ ಕೂಡಾ ನಮಗೆ ದೇವರೇ. ಅವರನ್ನು ಪೂಜ್ಯ ಭಾವನೆಯಿಂದ ನೋಡುವ ಕೋಟ್ಯಂತರ ಜನ ಇದ್ದಾರೆ. ಅಮೆರಿಕ, ಯು.ಕೆಯಲ್ಲಿ ಅವರ ಪ್ರತಿಮೆ ಇಟ್ಟಿದಾರೆ ಎಂದು ಹೇಳಿದರು.
ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ, ವಾಹನ ಚಾಲಕರ ಸಂಘದ ಅಧ್ಯಕ್ಷ ಬಿರ್ವಾಳ್ ಚಿಕ್ಕಣ್ಣ ಮಾತನಾಡಿದರು.
ಈ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ್, ಚಿಕ್ಕಣ್ಣ , ಅಂಬೇಡ್ಕರ್ ಟ್ರಸ್ಟ್ ಅಧ್ಯಕ್ಷ ಚನ್ನೀಪುರ ನಾಗರಾಜು ,ಗ್ರಾ.ಪಂ. ಉಪಾಧ್ಯಕ್ಷ ಲಂಕೆ ರಮೇಶ್, ಮಹಾಸಭಾ ಪ್ರಧಾನ ಕಾರ್ಯದರ್ಶಿ ಚನ್ನೀಪುರ ಮಲ್ಲೇಶ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೆಂಡಗಣ್ಣಸ್ವಾಮಿ, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಹುಣಸಹಳ್ಳಿ ನಾಗರಾಜು, ಮುಖಂಡರು ಗ್ರಾಮೀಣ ಮಹೇಶ್, ಉಯ್ಯಂಬಳ್ಳಿ ನಾಗರಾಜು ಲಂಕೆ ಲಕ್ಷ್ಮಣ್, ಚಿನ್ನಯ್ಯ, ದೊಡ್ಡಯ್ಯ, ಬಿಲ್ಲಯ್ಯ, ಮಲ್ಲಿಕಾರ್ಜುನ, ಚೆಲುವರಾಜು, ಇದಿಯಪ್ಪ, ಇನ್ನೂ ಮುಖಂಡರು ಸೇರಿದಂತೆ ಭಾಗಿಯಾಗಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx