ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರ ಧ್ವನಿ ಹಾಗೂ ಫೋಟೊವನ್ನು ಅವರ ಅನುಮತಿ ಇಲ್ಲದೇ ಯಾರೂ ಬಳಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.
ತಮ್ಮ ವ್ಯಕ್ತಿತ್ವದ ಹಕ್ಕು ಕಾಪಾಡಿಕೊಳ್ಳಲು ಅನುಮತಿ ನೀಡಬೇಕು ಎಂದು ಅಮಿತಾಭ್ ಬಚ್ಚನ್ ಹೈಕೋರ್ಟ್ ಮೊರೆ ಹೋಗಿದ್ದರು. ಅಮಿತಾಭ್ ಅವರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಶುಕ್ರವಾರ ನೀಡಿದ ಮಧ್ಯಂತರ ಆದೇಶದಲ್ಲಿ ಅನುಮತಿ ಇಲ್ಲದೇ ಅವರ ಫೋಟೊ, ಧ್ವನಿ ಬಳಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.
ಖ್ಯಾತ ವ್ಯಕ್ತಿಯ ವ್ಯಕ್ತಿತ್ವವನ್ನು ದುರ್ಬಳಕೆ ಮಾಡಿಕೊಳ್ಳುವುದು ಸರಿಯಲ್ಲ. ಅದು ಕೂಡ ಆ ವ್ಯಕ್ತಿ ಸಾಕಷ್ಟು ಜಾಹಿರಾತುಗಳಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಅವರ ಫೋಟೊ ಹಾಗೂ ಧ್ವನಿ ಬಳಸುವುದು ಕಾನೂನು ಉಲ್ಲಂಘನೆ ಎಂದು ಹೇಳಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz