nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026
    Facebook Twitter Instagram
    ಟ್ರೆಂಡಿಂಗ್
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    • ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ
    • ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ
    • ತಿಪಟೂರಿನ ಟೈಮ್ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ: ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಶ್ಮಿಗೆ 1 ಲಕ್ಷ ರೂ. ಬಹುಮಾನ ಘೋಷಣೆ
    • ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ
    • ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ
    • ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೇ 13ಕ್ಕೆ ಸಹಕಾರ ಸಚಿವ ಕೆ.ಎನ್.ರಾಜಣ್ಣರ 75ನೇ ಜನ್ಮದಿನದ ಅಮೃತೋತ್ಸವ ಸಮಾರಂಭ
    ಕೊರಟಗೆರೆ May 5, 2025

    ಮೇ 13ಕ್ಕೆ ಸಹಕಾರ ಸಚಿವ ಕೆ.ಎನ್.ರಾಜಣ್ಣರ 75ನೇ ಜನ್ಮದಿನದ ಅಮೃತೋತ್ಸವ ಸಮಾರಂಭ

    By adminMay 5, 2025No Comments2 Mins Read

    ಕೊರಟಗೆರೆ:  ತುಮಕೂರು ನಗರದಲ್ಲಿ ಮೇ 13ರಂದು ನಡೆಯುವ ರಾಜ್ಯದ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ನವರ 75ನೇ ಜನ್ಮದಿನದ ಅಮೃತೋತ್ಸವದ ಸಮಾರಂಭದಲ್ಲಿ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಿದ್ದು, ಸಹಕಾರ ರತ್ನ ಕೆ.ಎನ್.ರಾಜಣ್ಣನವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷ ಧನ್ಯಕುಮಾರ್ ಕರೆ ನೀಡಿದರು..

    ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು,  ಜಿಲ್ಲೆಯ ಎಲ್ಲಾ ಹಿಂದುಳಿದ ವರ್ಗಗಳ ಜನಾಂಗದವರು ತೀರ್ಮಾನದಂತೆ ಮೇ 13 ರಂದು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ತುಮಕೂರು ನಗರದ ಬಿ.ಹೆಚ್.ರಸ್ತೆಯ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ ನಡೆಸಲು ತೀರ್ಮಾನಿಸಲಾಗಿದ್ದು, ಕಲ್ಪತರು ನಾಡು ತುಮಕೂರು ಜಿಲ್ಲೆಯ ರೈತರು ಸೇರಿದಂತೆ, ಸಾಮಾಜಿಕ, ಸಹಕಾರ ವಲಯದ ಸಮಗ್ರ ಅಭಿವೃದ್ದಿಗೆ ಬದ್ದತೆಯಿಂದ ತೊಡಗಿಸಿಕೊಂಡಿರುವ ಜನಪ್ರಿಯ ನಾಯಕ ಸಹಕಾರ ರಂಗದ ಪ್ರತಿಷ್ಠಿತ ಸಹಕಾರ ರತ್ನ ಪುರಸ್ಕೃತರು, ಕರ್ನಾಟಕ ಸರ್ಕಾರದ ಸಹಕರ ಸಚಿವರಾದ ಕೆ.ಎನ್.ರಾಜಣ್ಣ ನವರು 75ನೇ ವರ್ಷಕ್ಕೆ ಕಾಲಿರಿಸಿದ್ದಾರೆ, ಅವರು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಬೆಳ್ಳಾವಿ ಶಾಸಕರಾಗಿ, ಪ್ರಸ್ತುತ ಎರಡನೇ ಅವಧಿಗೆ ಮಧುಗಿರಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರೂ ಆಗಿರುವ ಕೆ.ಎನ್.ರಾಜಣ್ಣ ನವರ ಸೇವೆ ಬಹಳ ಅಪಾರವಾದದು ಎಂದು ತಿಳಿಸಿದರು.


    Provided by
    Provided by

    ತುಮಕೂರು ಡಿಸಿಸಿ ಬ್ಯಾಂಕ್‌ ನಲ್ಲಿ ಕಳೆದ 3 ದಶಕಗಳಿಂದ ಅಧ್ಯಕ್ಷರಾಗಿ ಜಿಲ್ಲೆಯ ರೈತರ ಹಿತೈಷಿಯಾಗಿ ಅತ್ಯುತ್ತಮ ಸಹಕಾರ ನೀಡುತ್ತಿದ್ದಾರೆ, ನೇರ ನಡೆ ನುಡಿಯ ಕೆ.ಎನ್. ರಾಜಣ್ಣ ರವರು ಪಕ್ಷಾತೀತವಾಗಿ, ಜಾತ್ಯಾತೀತವಾಗಿ ರೈತರ, ಶೋಷಿತರ ಹಾಗೂ ಎಲ್ಲಾ ಜಾತಿಯ ಬಡವರ ಏಳಿಗೆಗೆ ನಿರಂತರ ಶ್ರಮಿಸುತ್ತಿದ್ದಾರೆ, ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು , ಬಂಗಾರಪ್ಪ, ಪ್ರಚಲಿತ ರಾಜಕಾರಣ  ಮುಖ್ಯಮಂತ್ರಿ ಸಿದ್ದರಾಮಯ್ಯ ಇವರುಗಳ ಆದರ್ಶದಂತೆ ತಮ್ಮ ಜೀವನವನ್ನು ಹಿಂದುಳಿದ ವರ್ಗ ಮತ್ತು ದಲಿತರ ಏಳಿಗೆಗೆ ದುಡಿಯುತ್ತಿದ್ದು ರೈತರ ಪಾಲಿನ ಜೀವನಾಡಿಯಾಗಿ ಸಹಕಾರ ಕ್ಷೇತ್ರವನ್ನು ಅತ್ಯುನ್ನತ ಮಟ್ಟಕ್ಕೆ ಕೊಂಡೊಯ್ದ ಮಹಾನ್ ರಾಜಕಾರಣಿ ಆಗಿದ್ದಾರೆ ಎಂದು ತಿಳಿಸಿದರು.

    ಪ.ಪಂ. ಸದಸ್ಯ ಹಿಂದುಳಿದ ವರ್ಗಗಳ ನಾಯಕ ಎ.ಡಿ.ಬಲರಾಮಯ್ಯ ಮಾತನಾಡಿ. ಸಹಕಾರ ಸಚಿವ ಕೆ.ಎನ್.ರಾಜಣ್ಣ ನವರ 75ನೇ ಜನ್ಮದಿನವನ್ನು ಬಹಳ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಕೊರಟಗೆರೆ ತಾಲೂಕಿನಿಂದ ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಈ ಸಮಾರಂಭಕ್ಕೆ  ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮನವಿ ಮಾಡಿದರು.

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ಮಾತನಾಡಿ, ಕೆ.ಎನ್.ರಾಜಣ್ಣ ಕಳೆದ 50 ವರ್ಷಗಳಿಂದ ಸಾಮಾಜಿಕ ಹಾಗೂ ಸಹಕಾರ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳನ್ನು ಗುರುತಿಸಿ ಅವರ ಬದುಕಿನ ಸಾರ್ಥಕತೆಯ 75ನೇ ಜನ್ಮದಿನದ ಅಂಗವಾಗಿ ತುಮಕೂರು ಜಿಲ್ಲೆಯ ಆತ್ಮೀಯ ಅಭಿಮಾನಿಗಳು, ಹಿತೈಷಿಗಳು ಬಿಡುಗಡೆ ಗೊಳಿಸುತ್ತಿರುವ ಕೆ.ಎನ್.ಆರ್. ಅಭಿನಂದನಾ ಗ್ರಂಥ ಬಿಡುಗಡೆ ಮಾಡುತ್ತಿರುವುದು ಅಭಿನಂದನಾರ್ಹವಾಗಿದೆ ಎಂದರು.

    ಪತ್ರಿಕಾ ಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಹನುಮಾನ್, ಮೇಲ್ವಿಚಾರಕ ಬೋರಣ್ಣ, ಶಿವಣ್ಣ, ಮಂಜೇಶ್, ಶಾಂತಕುಮಾರ್, ಪವನ್‌ ಕುಮಾರ್, ಆಂಜನೇಯುಲು, ಎನ್, ಪದ್ಮನಾಬ್, ರುದ್ರೇಶ್, ಅಶ್ವತ್ಥ ನಾರಾಯಣರಾಜು, ಗಟ್ಲಹಳ್ಳಿ ಕುಮಾರ್, ವಿನಯ್‌ ಕುಮಾರ್, ಕೇಶವಮೂರ್ತಿ, ಗೋವಿಂದರಾಜು, ಚಿಕ್ಕಣ್ಣ,ರವಿಕುಮಾರ್, ದೊಡ್ಡಣ್ಣ, ಓಬಳರಾಜು, ಶಶಿಕುಮಾರ್, ರಾಜೇಶ್‌ ದೊಡ್ಡಮುನಿ, ಚಿನ್ನಿ ವೆಂಕಟಶೆಟ್ಟಿ, ಶಶಿಕುಮಾರ್, ಮಂಜುನಾಥ್,ಗೌರಿಶಂಕರ್, ಆನಂದ್, ಕಾಲಿ ಚರಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    April 6, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ನವದೆಹಲಿ: ಭಾರತದಲ್ಲಿ ಸಮಾನತೆಯನ್ನು ಹೋಗಲಾಡಿಸಿ, ಸಂವಿಧಾನವನ್ನು ನಾಶಪಡಿಸುವುದೇ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್…

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.