ಮಂಡ್ಯ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಚಾಲಕ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯಗಳಾಗಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಟಿ ಎಂ ಹೊಸೂರು ಗ್ರಾಮದ ಬಳಿ ನಡೆದಿತ್ತು.
ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಾಟಾ ಕಾರು ಡಿವೈಡರ್ ಹಾರಿ ಮೈಸೂರು ಕಡೆಗೆ ಹೋಗುತ್ತಿದ್ದ ಶಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟಿದ್ದಾನೆ.
ಇನ್ನು ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


