nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ

    July 3, 2026

    ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ

    July 3, 2026

    ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ

    July 3, 2026
    Facebook Twitter Instagram
    ಟ್ರೆಂಡಿಂಗ್
    • ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ
    • ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ
    • ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ
    • ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ
    • ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ
    • ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ
    • 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಮಾಜಿ ಜಿ.ಪಂ. ಸದಸ್ಯ ಜಿ. ನಾರಾಯಣ್ ಘೋಷಣೆ
    • ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದಲ್ಲಿ ಅಧಿಕಾರ ಮಾಡುತ್ತಿರುವುದು ಜನವಿರೋಧಿ ಸರ್ಕಾರ: ಕಟೀಲ್
    ರಾಜ್ಯ ಸುದ್ದಿ July 5, 2023

    ರಾಜ್ಯದಲ್ಲಿ ಅಧಿಕಾರ ಮಾಡುತ್ತಿರುವುದು ಜನವಿರೋಧಿ ಸರ್ಕಾರ: ಕಟೀಲ್

    By adminJuly 5, 2023No Comments3 Mins Read
    nalin kumar kateel

    ಸುಳ್ಳು ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದು ಜನವಿರೋಧಿ ನೀತಿ ಅನುಸರಿಸುತ್ತಿರುವ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‌ ಕುಮಾರ್ ಕಟೀಲ್ ಅವರು ತಿಳಿಸಿದರು.

    ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಕಂಡಿಷನ್ ಇಲ್ಲದೆ ಗ್ಯಾರಂಟಿ ಜಾರಿ ಮಾಡಲು ಆಗ್ರಹಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಅವರು ಮಾತನಾಡಿದರು. ಚುನಾವಣೆ ಪೂರ್ವದಲ್ಲಿ ಮನೆಮನೆಗೆ ಸಹಿ ಹಾಕಿದ ಗ್ಯಾರಂಟಿ ಕಾರ್ಡ್ ಗಳನ್ನು ಹಂಚುವ ಮೂಲಕ ಸುಳ್ಳು ಘೋಷಣೆಗಳ ಆಧಾರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಇದೀಗ ಜನರಿಗೆ ಮೋಸ ಮಾಡುತ್ತಿದೆ ಎಂದು ಟೀಕಿಸಿದರು.

    ಸರಕಾರ ಬಂದು 24 ಗಂಟೆಗಳಲ್ಲಿ ಭರವಸೆ ಅನುಷ್ಠಾನಕ್ಕೆ ತರುವುದಾಗಿ ಹೇಳಿದವರು ಇದೀಗ ಸುಮಾರು 2 ತಿಂಗಳಾದರೂ ಸಮರ್ಪಕ ಮಾರ್ಗಸೂಚಿಯನ್ನೇ ನೀಡಿಲ್ಲ. ಗ್ಯಾರಂಟಿಗಳನ್ನು ಕಂಡಿಷನ್‌ಗಳೊಂದಿಗೆ ಜಾರಿ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. 10 ಕೆಜಿ ಅಕ್ಕಿ ಎಂದವರು ಇದೀಗ 5 ಕೆಜಿಗೆ ಹಣ ನೀಡುತ್ತಿದ್ದಾರೆ ಎಂದ ಅವರು, ಕೊಟ್ಟ ಮಾತಿನಂತೆ ನಡೆಯಿರಿ ಎಂದು ಆಗ್ರಹಿಸಿದರು. ವಿದ್ಯುತ್ ದರ ಇವತ್ತು ಹೊರೆಯಾಗಿದೆ ಎಂದರು. ವಿದ್ಯುತ್ ದರ ಇಳಿಸಿ ಹಿಂದಿನ ದರ ವಿಧಿಸಲು ಆಗ್ರಹಿಸಿದರು. ರಾಜ್ಯ ಸರಕಾರ ದ್ವೇಷದ ರಾಜಕೀಯ ಮಾಡುತ್ತಿದೆ. ಮತಾಂತರ ನಿಷೇಧ ಕಾಯ್ದೆ, ಗೋಹತ್ಯಾ ನಿಷೇಧ ರದ್ದು ಮಾಡುವುದನ್ನು ಅವರು ಖಂಡಿಸಿದರು. ಜನವಿರೋಧಿ ಸರಕಾರ ಇದೆಂದು ತಿಳಿಸಿದ ಅವರು, 5 ಭಾಗ್ಯಗಳನ್ನು ಮನೆಮನೆಗೆ ತಲುಪಿಸುವ ವರೆಗೆ ಹೋರಾಟ ಮುಂದುವರೆಸುತ್ತೇವೆ ಎಂದು ಎಚ್ಚರಿಸಿದರು.

    ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಮಾತನಾಡಿ, ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದು ಜನರನ್ನು ವಂಚಿಸಿದ ಸರಕಾರ ಇದು ಎಂದು ಟೀಕಿಸಿದರು. 10 ಕೆಜಿ ಅಕ್ಕಿ, ಜೊತೆಗೆ ಕೇಂದ್ರದಿಂದ ಕೊಡುವ 5 ಕೆಜಿ ಅಕ್ಕಿ ಸೇರಿ 15 ಕೆಜಿ ಅಕ್ಕಿ ಕೊಡಲೇಬೇಕು. 200 ಯೂನಿಟ್ ವಿದ್ಯುತ್ ಉಚಿತವಾಗಿ ಕೊಡಲೇಬೇಕು. ನಿರುದ್ಯೋಗಿಗಳಿಗೆ ಷರತ್ತಿನಲ್ಲದೆ ಭತ್ಯೆ ಕೊಡಿ. ಗೃಹಿಣಿಗೆ 2 ಸಾವಿರ ರೂ. ಕೊಡಿ ಎಂದು ಆಗ್ರಹಿಸಿದರು.

    ಗೋಹತ್ಯೆ ನಿಷೇಧ ಕಾಯ್ದೆ ರದ್ದು ಮಾಡಿದರೆ ಅದರ ಪರಿಣಾಮ ಒಳ್ಳೆಯದಾಗುವುದಿಲ್ಲ. ಗ್ಯಾರಂಟಿ ಅನುಷ್ಠಾನ ಮಾಡಿ; ಇಲ್ಲವಾದರೆ ಅಧಿಕಾರ ಬಿಟ್ಟು ತೊಲಗಿ ಎಂದು ಎಚ್ಚರಿಕೆ ನೀಡಿದರು. ಜನವಿರೋಧಿ, ಭ್ರಷ್ಟ ಸರಕಾರದ ವಿರುದ್ಧ ನಿರಂತರ ಹೋರಾಟಕ್ಕೆ ಕಾರ್ಯಕರ್ತರು ಸಿದ್ಧರಾಗಬೇಕು ಎಂದು ಮನವಿ ಮಾಡಿದರು.

    ಕೇಂದ್ರ ಸಚಿವ ಭಗವಂತ್ ಖೂಬಾ ಅವರು ಮಾತನಾಡಿ, ವಂಚನೆ ತನ್ನ ಹುಟ್ಟುಗುಣ ಎಂಬುದನ್ನು ಕಾಂಗ್ರೆಸ್ ಮತ್ತೆ ಸಾಬೀತುಪಡಿಸಿದೆ ಎಂದು ಟೀಕಿಸಿದರು. ಯುವ ನಾಯಕ ಬಿ. ವೈ. ವಿಜಯೇಂದ್ರ ಅವರು ಮಾತನಾಡಿ, ಇದು ಮಾತು ತಪ್ಪಿದ ದುಷ್ಟ ಸರಕಾರ ಎಂದು ಆರೋಪಿಸಿದರು. ಜನರ ಕಿವಿಗೆ ಹೂ ಮುಡಿಸುವ ಕೆಲಸವನ್ನು ಈ ಸರಕಾರ ಮಾಡಿದೆ ಎಂದು ಆಕ್ಷೇಪಿಸಿದರು. ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಅವರು ಮಾತನಾಡಿ, ಭ್ರಷ್ಟ, ಜನವಿರೋಧಿ ಸಿದ್ದರಾಮಯ್ಯ ಸರಕಾರವು ದೀರ್ಘ ಕಾಲ ಅಧಿಕಾರದಲ್ಲಿ ಉಳಿಯುವುದಿಲ್ಲ ಎಂದು ನುಡಿದರು. ಎಲ್ಲ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವಂತೆ ಆಗ್ರಹಿಸಿದರು. ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಎಲ್ಲ 28 ಸ್ಥಾನಗಳನ್ನು ಗೆಲ್ಲಲಿದೆ ಎಂದು ತಿಳಿಸಿದರು.

    ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಮಾತನಾಡಿ, ಈ ಸರಕಾರದ ವಾರಂಟಿ ಡಿಸೆಂಬಲ್ವರೆಗೆ ಮಾತ್ರ. ಸಿದ್ದರಾಮಯ್ಯ ಕುರ್ಚಿ ಖಾಲಿ ಮಾಡುವುದಿಲ್ಲ; ಡಿ. ಕೆ. ಶಿವಕುಮಾರೆ ಕುರ್ಚಿ ಸಿಗುವುದಿಲ್ಲ ಎಂದು ನುಡಿದರು. ಗ್ಯಾರಂಟಿ ವಿಷಯದಲ್ಲಿ ಸರಕಾರ ಈಗ ಹೊಸ ನಾಟಕ ಮಾಡುತ್ತಿದೆ ಎಂದು ಟೀಕಿಸಿದರು. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲಾಗದು ಎಂದು ನುಡಿದರು.

    ಬೆಂಗಳೂರು ಮಹಾನಗರ ಬಿಜೆಪಿ ಘಟಕಗಳ ವತಿಯಿಂದ “ಸ್ವಾತಂತ್ರ್ಯ ಉದ್ಯಾನವನ”ದಲ್ಲಿ ಈ ಪ್ರತಿಭಟನೆ ನಡೆಯಿತು. ವಿದ್ಯುತ್ ದರ ಹೆಚ್ಚಳವನ್ನು ಯಥಾಸ್ಥಿತಿಗೆ ತರಬೇಕು; 10 ಕೆಜಿ ಅಕ್ಕಿ ಕೊಡುವ ಭರವಸೆಯನ್ನು ಯಥಾವತ್ ಜಾರಿ ಮಾಡಬೇಕು ಎಂದು ಆಗ್ರಹಿಸಲಾಯಿತು. ಕಾಂಗ್ರೆಸ್ ಸರಕಾರದ ಸುಳ್ಳು ಭರವಸೆಗಳ ವಿರುದ್ಧ ಘೋಷಣೆ ಕೂಗಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‌ಕುಮಾರ್ ಕಟೀಲ್, ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಡಿ. ವಿ. ಸದಾನಂದಗೌಡ, ಸಂಸದ ಪಿ. ಸಿ. ಮೋಹನ್, ಮಾಜಿ ಸಭಾಪತಿ  ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವರಾದ ಕೆ. ಎಸ್. ಈಶ್ವರಪ್ಪ, ಗೋವಿಂದ ಕಾರಜೋಳ, ಡಾ. ಅಶ್ವತ್ಥನಾರಾಯಣ್, ಮುರುಗೇಶ್ ನಿರಾಣಿ, ಬಿ. ಸಿ. ನಾಗೇಶ್, ಹಾಲಪ್ಪ ಆಚಾರ್, ಬಿ. ಸಿ. ಪಾಟೀಲ್, ನಾರಾಯಣಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್. ರವಿಕುಮಾರ್, ಸಿದ್ದರಾಜು, ಯುವ ನಾಯಕ ಬಿ. ವೈ. ವಿಜಯೇಂದ್ರ, ಶಾಸಕರಾದ ಶಶೀಲ್ ನಮೋಶಿ, ತೇಜಸ್ವಿನಿ ಗೌಡ, ಮಾಜಿ ಶಾಸಕ ಎನ್. ಮಹೇಶ್, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ. ಲ. ನರೇಂದ್ರ ಬಾಬು, ಮುಖಂಡರಾದ ತಾರಾ ಅನುರಾಧಾ, ಎಸ್. ಕೆ. ಬೆಳ್ಳುಬ್ಬಿ, ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಮತ್ತು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು. ಬೆಂಗಳೂರು ಮಹಾನಗರ ಜಿಲ್ಲಾ ಅಧ್ಯಕ್ಷರಾದ ಜಿ. ಮಂಜುನಾಥ್, ಎನ್. ಆರ್. ರಮೇಶ್, ನಾರಾಯಣ ಅವರು ಪಾಲ್ಗೊಂಡಿದ್ದರು. ಅನೇಕ ಮುಖಂಡರು ಮಾತನಾಡಿ ಸಿದ್ದರಾಮಯ್ಯರವರ ಸರಕಾರ ಜನತೆಗೆ ದ್ರೋಹ ಮಾಡಿದೆ ಎಂದು ಟೀಕಿಸಿದರು. ಭಾರತ್ ಮಾತಾ ಕಿ ಜೈ ಘೋಷಣೆ ಕೂಗಲಾಯಿತು. ಗ್ಯಾರಂಟಿಗಳನ್ನು ಪೂರೈಸದೆ ಇರುವ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಕೂಗಲಾಯಿತು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ

    July 3, 2026

    ಸಿರಾ: ಜೂನ್ 30 ರಿಂದ ಜುಲೈ 29 ರವರೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಎಸ್…

    ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ

    July 3, 2026

    ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ

    July 3, 2026

    ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ

    July 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.