ಹಾವೇರಿ: ಕೊಬ್ಬರಿ ಹೋರಿ ತಿವಿದು ಓರ್ವ ವಯೋವೃದ್ಧ ವ್ಯಕ್ತಿ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು 70 ವರ್ಷದ ಚಂದ್ರಶೇಖರ್ ಕೊಡಿಹಳ್ಳಿ ಎಂದು ಗುರುತಿಸಲಾಗಿದೆ.
ಚಂದ್ರಶೇಖರ ಕೋಡಹಳ್ಳಿ ಅವರು ಹಾವೇರಿಯ ದಾನೇಶ್ವರಿನಗರದ ನಿವಾಸಿ. ಘಟನೆಯಲ್ಲಿ ಇನ್ನಿಬ್ಬರಿಗೆ ಗಂಭೀರ ಗಾಯವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ.
ಹೋರಿ ಬೆದರಿಸುವ ಸ್ಪರ್ಧೆಯನ್ನು ನೋಡಿ ವಾಪಸ್ ಮನೆಗೆ ಹೋಗುತ್ತಿದ್ದ ವೇಳೆ, ಹಿಂದಿನಿಂದ ಹೋರಿ ತಿವಿದು ಘಟನೆ ನಡೆದಿದೆ. ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಹಾವೇರಿಯ ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವ ಪ್ರತಿವರ್ಷ ದೀಪಾವಳಿಯಂದು ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಜಾತ್ರಾ ಸಮಿತಿ ಬಲಿಪಾಡ್ಯಮಿಯಂದು ದನ ಬೆದರಿಸುವ ಸ್ಪರ್ಧೆಯನ್ನು ಆಯೋಜಿಸುತ್ತದೆ. ಈ ಸ್ಪರ್ಧೆಯಲ್ಲಿ ಯಾವುದೇ ಬಹುಮಾನ ಇರುವುದಿಲ್ಲ. ಸ್ಪರ್ಧೆ ನಡೆದ ನಂತರ ಬೇರೆ ಕಡೆ ಸ್ಪರ್ಧೆಗಳಲ್ಲಿ ಹೋರಿಗಳಿಗೆ ಬಹುಮಾನ ನೀಡಲಾಗುತ್ತದೆ.
ಬುಧವಾರ ಮಧ್ಯಾಹ್ನ ಈ ಸ್ಪರ್ಧೆ ನಡೆಯಿತು. ಹಾವೇರಿ ನಗರ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಂದ ರೈತರು ತಮ್ಮ ನೆಚ್ಚಿನ ಹೋರಿಗಳನ್ನು ಸ್ಪರ್ಧೆಗೆ ಕರೆತಂದಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC